ಬೆಂಗಳೂರು, ಜ. 04: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು, ನಿನ್ನೆ ಕುಸಿದ್ದು ಬಿದ್ದು ಅನಾರೋಗ್ಯದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ವಿಚಾರಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆರೋಗ್ಯದ ಬಗ್ಗೆ ವಿಚಾರಿಸಿದರು.
ಈ ಸಂದರ್ಭ ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಮತ್ತಿತರ ಸಚಿವರು ಭೇಟಿಯಾಗಿ ಸದಾನಂದ ಗೌಡರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ನಿನ್ನೆ ಸದಾನಂದ ಗೌಡರು ಶಿವಮೊಗ್ಗದ ಬಿಜೆಪಿಯ ವಿಶೇಷ ಸಭೆ ಮುಗಿಸಿಕೊಂಡು ಚಿತ್ರದುರ್ಗಕ್ಕೆ ಆಗಮಿಸಿದ ವೇಳೆ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಶುಗರ್ ಲೋ ಆಗಿ ಮುರ್ಛೆ ತಪ್ಪಿ ಬಿದ್ದಿದ್ದರು. ಇಂತಹ ಅವರನ್ನು ನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದಾನಂದ ಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.