vijaya times advertisements
Visit Channel

ಸೈನಾ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌

ದೆಹಲಿ : ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ ವಿರುದ್ದ ಆಕ್ಷೇಪಾರ್ಹ ಟ್ವೀಟ್‌ ಮಾಡಿದ ನಟನ ವಿರುದ್ದ ಆಕ್ರೋಶಗಳು ಕೇಳಿ ಬರುತ್ತಿದೆ. ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್‌ ಮಾಡಿರುವ ನಟ ಸಿದ್ದಾರ್ಥ್ ಅವರು ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮಗೆ ಆಗಿರುವ ಭದ್ರತಾ ಲೋಪವನ್ನು ಖಂಡಿಸಿ ಸೈನಾ ನೆಹ್ವಾಲ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಇದೊಂದು ದೊಡ್ಡ ಲೋಪ ಎಂದು ಬರೆದುಕೊಂಡಿದ್ದರು.

ನಟನಾಗಿ ಸಿದ್ಧಾರ್ಥ್ ಅವರನ್ನು ಗೌರವಿಸುತ್ತಿದ್ದೆ. ಆದರೆ ಅವರ ಇಂತಹ ಮನಸ್ಥಿತಿಯ ಬಗ್ಗೆ ನಿರೀಕ್ಷಿಸಿರಲಿಲ್ಲ. ಈ ವಿಚಾರವಾಗಿ ಪ್ರತಿಕ್ರಿಯಿ ಸಲು ಅವರು ಉತ್ತಮವಾದ ಪದಗಳನ್ನು ಬಳಸಬಹು ದಿತ್ತು ಎಂದು ಸೈನಾ ಹೇಳಿದ್ದಾರೆ. ಅವರು ಯಾವ ಅರ್ಥದಲ್ಲಿ ಹಾಗೆ ಪ್ರತಿಕ್ರಿಯಿಸಿದ್ದಾರೋ ನನಗೆ ತಿಳಿದಿಲ್ಲ. ನಾನವರನ್ನು ನಟನಾಗಿ ಮಾತ್ರ ಇಷ್ಟಪಟ್ಟಿದ್ದೆ. ಆದರೆ ಇದು ಸರಿಯಲ್ಲ. ಇನ್ನಷ್ಟು ಉತ್ತಮ ಪದಗಳೊಂದಿಗೆ ಅವರು ಪ್ರತಿಕ್ರಿಯಿಸಬಹುದಾಗಿತ್ತು. ಉಳಿದದ್ದನ್ನು ಟ್ವಿಟರ್ ಮತ್ತು ನೀವೆಲ್ಲ ಗಮನಿಸಿದ್ದೀರಿ. ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.  ಪ್ರಧಾನಿಯವರ ಭದ್ರತೆಯೇ ಸಮಸ್ಯೆಯಾಗಿದ್ದರೆ ಮತ್ತೆ ಈ ದೇಶದಲ್ಲಿ ಯಾವುದು ಸುರಕ್ಷಿತವಾಗಿದೆ ಎಂಬುದು ನನಗೆ ತಿಳಿದಿಲ್ಲ ಎಂದು ಸೈನಾ ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದಾರ್ಥ್, ವಿಶ್ವದ ಸಬ್ಬಲ್ ಕಾಕ್ ಚಾಂಪಿಯನ್  ಧನ್ಯವಾದಗಳು ದೇವರೇ, ನಮ್ಮಲ್ಲೂ ಭಾರತದ ರಕ್ಷಕರಿದ್ದಾರೆ ಎಂದು ಟ್ವೀಟ್‌ ಮಾಡಿದ್ದರು. ಸೈನಾ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಲು ಸಿದ್ದಾರ್ಥ್ ಬಳಸಿದ ಪದಗಳ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಅವರ ಟ್ವಿಟರ್ ಖಾತೆಯನ್ನೇ ಬ್ಲಾಕ್‌ ಮಾಡಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಭಾರತೀಯ ಟ್ವಿಟ್ಟರ್ ಸಂಸ್ಥೆಗೆ ಆಗ್ರಹ ವ್ಯಕ್ತವಾಗಿದೆ.  

Latest News

ಪ್ರಮುಖ ಸುದ್ದಿ

220 ಕ್ಕೂ ಅಧಿಕ ಪಿಎಫ್ಐ ಕಾರ್ಯಕರ್ತರ  ಮೇಲೆ  ಪಿಎಆರ್‌ ಕಾಯ್ದೆ ಅಸ್ತ್ರ ; ಏನಿದು ಪಿಎಆರ್?

(PAR Act on PFI workers) ಸ್ಥಿರ ಹಾಗೂ ಚರಾಸ್ತಿ ಮೌಲ್ಯವೆಷ್ಟು ಎಂಬುದನ್ನು ನಮೂದಿಸಿ, ತಾಲೂಕು ದಂಡಾಧಿಕಾರಿಗಳು, ಬಂಧಿತ ವ್ಯಕ್ತಿಯಿಂದ ಮುಚ್ಚಳಿಕೆ ಪಡೆಯುತ್ತಾರೆ.

ದೇಶ-ವಿದೇಶ

ಪಾಕಿಸ್ತಾನಕ್ಕೆ ಎಫ್-16 : ಜೈಶಂಕರ್ ಹೇಳಿಕೆಗೆ ಅಮೇರಿಕಾ  ಪ್ರತಿಕ್ರಿಯೆ

ಸದ್ಯ ಅಮೇರಿಕಾ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್  ಭಯೋತ್ಪಾದನೆಯ ವಿರುದ್ಧ ಹೋರಾಡಲು ಎಫ್-16 ಯುದ್ದ ವಿಮಾನಗಳನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತಿದೆ ಎಂಬ ಅಮೇರಿಕಾದ ವಾದವನ್ನು  ತೀವ್ರವಾಗಿ ಟೀಕಿಸಿದ್ದರು.

ಲೈಫ್ ಸ್ಟೈಲ್

ಇಲ್ಲಿವೆ ನೋಡಿ ವಿಚಿತ್ರ ಸಾಕುಪ್ರಾಣಿಗಳು: ಇವುಗಳ ಬಗ್ಗೆ ಕೇಳಿದರೆ ಅಚ್ಚರಿಯಾಗುವುದು ಖಂಡಿತ!

ಸಾಕುಪ್ರಾಣಿಗಳೆಂದರೆ ತಕ್ಷಣ ನೆನಪಿಗೆ ಬರುವುದು, ನಾಯಿ, ಬೆಕ್ಕು, ಮೊಲ, ಗಿಳಿ, ಪಾರಿವಾಳಗಳು ಅಲ್ಲವೇ? ಆದರೆ, ಜಗತ್ತಿನಲ್ಲಿ ಬೇರೆ ಬೇರೆ ಕಡೆ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ತಮ್ಮ ಸಾಕುಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಾರೆ

Priyank
ರಾಜಕೀಯ

‘ಲಂಚ ಕೊಡಬೇಕಾಗಿಲ್ಲ’ ಅಭಿಯಾನವನ್ನು ವಿಧಾನಸೌಧದಲ್ಲೂ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ

ಸರ್ಕಾರಕ್ಕೆ ನಿಜಕ್ಕೂ ಇಚ್ಛಾಶಕ್ತಿ ಇದ್ದಿದ್ದರೆ ತಮ್ಮ ಮೇಲಿನ ಹಗರಣ ಆರೋಪಗಳನ್ನು ನ್ಯಾಯಾಂಗ (No bribe campaign) ತನಿಖೆಗೆ ವಹಿಸುತ್ತಿದ್ದರು.