‘ನನಗೆ ಜೀವ ಬೆದರಿಕೆ ಇದೆ , ನನ್ನನ್ನು ಬಂದೂಕುಗಳು ಕಾಯುತ್ತಿವೆ’ : ನಟ ಸಲ್ಮಾನ್ ಖಾನ್

Mumbai : ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಅವರ ಗ್ಯಾಂಗ್‌ನಿಂದ ಜೀವ ಬೆದರಿಕೆ ಇದೆ ಅನ್ನೋ ಶಾಕಿಂಗ್ ನ್ಯೂಸ್‌ ಸ್ವತ: ಬಾಲಿವುಡ್ ನಟ ಸಲ್ಮಾನ್ ಖಾನ್ ರವರೇ (Bollywood actor Salman Khan) ಬಹಿರಂಗಪಡಿಸಿದ್ದಾರೆ. ಈ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ (Salman Khan statement) ನೀಡಿದ ನಟ ಸಲ್ಮಾನ್ ಖಾನ್,”ಸಾಕಷ್ಟು ಭಯದಲ್ಲಿ ಬದುಕುತ್ತಿರುವೆ.

‘ನನ್ನನ್ನು ಬಂದೂಕುಗಳು ಕಾಯುತ್ತಿವೆ. ಅವರು ನನಗೆ ಯಾಕೆ ಗನ್ ಪಾಯಿಂಟ್ ಇಡುತ್ತಿದ್ದಾರೆ ಎನ್ನುವುದು ನನಗೆ ಇನ್ನೂ ಕೂಡ ಏನೂ ಅರ್ಥವಾಗುತ್ತಿಲ್ಲ.

ಆಗಲೇ ಮುಗಿದು ಹೋದ ಪ್ರಕರಣವನ್ನು ಮತ್ತೆ ಮತ್ತೆ ಯಾಕೆ ಕೆದುಕುತ್ತಿದ್ದಾರೆ ಎಂದಿದ್ದಾರೆ.

ಮಾಧ್ಯಮವೊಂದರ ಸಂದರ್ಶನದಲ್ಲಿ ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿ, ” ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಅಂತಿಮ ಗುರಿಯಾಗಿದೆ.

ಬಿಷ್ಣೋಯ್ ಸಮುದಾಯಕ್ಕೆ (Bishnoi community) ಸಲ್ಮಾನ್ ಖಾನ್ ಕ್ಷಮೆಯಾಚಿಸಿದಲ್ಲಿ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾರೆ.

ಅವರ ಈ ಮಾತು ಇದೀಗ ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ.

ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮುಂಬೈ (Salman Khan statement) ಪೊಲೀಸರು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ.

ಇದನ್ನೂ ಓದಿ : https://vijayatimes.com/iphone-from-tata-electronics/

ಮುಂಬೈ ಪೊಲೀಸರು ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಟೈಟ್ ಸೆಕ್ಯೂರಿಟಿ ನೀಡಿದ್ದಾರೆ.

ಈಗಾಗಲೇ ಮನೆಯ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದಾರೆ ಅಷ್ಟೇ ಅಲ್ಲದೇ,

ಸುಖಾಸುಮ್ಮನೆ ಅವರ ಮನೆ ಸುತ್ತ ಮುತ್ತ ಓಡಾಡುವಂತಿಲ್ಲ ಹಾಗೂ ಮನೆಯ ಮುಂದೆ ನಿಲ್ಲುವಂತಿಲ್ಲ ಎಂದು ಮುಂಬೈ ಠಾಣಾ ಪೊಲೀಸ್ ಇಲಾಖೆ (Mumbai Station Police Dept)

ಆದೇಶ ಹೊರಡಿಸಿದೆ.ಮತ್ತು ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ.

ಕೊಲೆ ಬೆದರಿಕೆಗೆ ಕಾರಣ :

ಈ ಹಿಂದೆ ನಟ ಸಲ್ಮಾನ್ ಖಾನ್ ಕೃಷ್ಣಮೃಗವೊಂದನ್ನು ಕೊಂದಿದ್ದರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ನಡುವೆ ಕಾಳಗ ನಡೆಯುತ್ತಲೇ ಇದೆ,

ಸದ್ಯಕ್ಕೆ ಇದು ಮುಗಿಯುವಂತೆ ಕಾಣುತ್ತಿಲ್ಲ. ಬಿಷ್ಣೋಯ್ ಈಗಾಗಲೇ ಜೈಲಿನಲ್ಲೇ ಇದ್ದಾನೆ.

ಜೈಲಿನಲ್ಲಿ ಇದ್ದುಕೊಂಡೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್ ಹಲವು ಬಾರಿಯಲ್ಲಿ ಅನೇಕ ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದ್ದಾರೆ .

Exit mobile version