ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: ನಾಳೆ ಸಂಜೆ 4ಕ್ಕೆ ನೂತನ ಸಚಿವರ ಪ್ರಮಾಣ ವಚನ

ಬೆಂಗಳೂರು, ಜ. 12: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಮಯ ನಿಗದಿಯಾಗಿದ್ದು, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ನಾಳೆಯೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದ್ದು, ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಇಂದು ಸಂಜೆ ವೇಳೆಗೆ ಸಚಿವರಾಗುವವರಿಗೆ ನಾನೇ ಮಾಹಿತಿ ನೀಡುತ್ತೇನೆ. ನಾಳೆ ನೂತನ ಸಚಿವ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Exit mobile version