ಸರ್ಕಾರವು ಕಾಟಾಚಾರಕ್ಕಾಗಿ ನೈಟ್‌ ಕರ್ಫ್ಯೂ ಹೇರಿ ಏನು ಸಾಧಿಸುತ್ತಿದೆ; ಗುಂಡುರಾವ್

ಬೆಂಗಳೂರು, ಡಿ. 24: ರೂಪಾಂತರಿ ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್‌ ಕರ್ಪ್ಯೂ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ. ಕಾಟಾಚಾರದ ರಾತ್ರಿ ಕರ್ಪ್ಯೂ ಹೇರಿ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ? ವಿವೇಕಯುತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವೇ ಇದು? ಈ ಸರ್ಕಾರಕ್ಕೇ ಅರಳು ಮರಳೋ? ಅಥವಾ ಸರ್ಕಾರ ನಡೆಸುವವರಿಗೆ ಅರಳು ಮರಳೋ? ಅರ್ಥವಾಗುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Exit mobile version