Visit Channel

ಸತತ ಏರಿಕೆ ಕಂಡ ತೈಲ ಬೆಲೆ!

190091-petrol

ನವದೆಹಲಿ, ಜ. 06: ಕೊರೋನಾ ಸಂಕಷ್ಟದ ಈ ದಿನಗಳಲ್ಲಿ  ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. 2020ರ ಡಿಸೆಂಬರ್ 7ರಿಂದ ಸತತವಾಗಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ಬೆಲೆಯನ್ನು ಹೆಚ್ಚಿಸಿದ್ದವು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಳವಾದ ಪರಿಣಾಮ ಸೋಮವಾರ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 30 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 26 ಪೈಸೆ ಏರಿಕೆಯಾಗಿತ್ತು ಎಂದು ವರದಿ ತಿಳಿಸಿದೆ.

ಭಾರತೀಯ ತೈಲ ಕಂಪನಿಗಳ ಪ್ರಕಟಣೆಯ ಪ್ರಕಾರ ದೇಶದ ವಿವಿಧ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಇಲ್ಲಿದೆ. ಬೆಂಗಳೂರು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.79 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 78.59 ರೂಪಾಯಿ. ಎಲ್ ಪಿಜಿ (ಅಡುಗೆ) ಸಿಲಿಂಡರ್ ಬೆಲೆ 697 ರೂಪಾಯಿ.

ದೆಹಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 83.71 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 73.87 ರೂಪಾಯಿ. ಮುಂಬೈ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90.34 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 80.51 ರೂಪಾಯಿ. ಚೆನ್ನೈ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.51 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 79.21 ರೂಪಾಯಿ.

ಕೋಲ್ಕತಾ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 85.19 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 77.24 ರೂಪಾಯಿ. ಈಗಷ್ಟೇ ಪುನರಾರಂಭಗೊಂಡಂತಹ ಜನಜೀವನ ಸಹಜ ಸ್ಥಿತಿಗೆ ಬರುವ ಮುನ್ನವೇ ಈ ಪೆಟ್ರೋಲ್  ಡೀಸೆಲ್ ಬೆಲೆಗಳಿಂದಾಗಿ ಜನರು ತತ್ತರಿಸುವಂತಾಗಿದೆ.

Latest News

Lorry driver
ಪ್ರಮುಖ ಸುದ್ದಿ

ಕುಡಿದು ಲಾರಿ ಚಾಲಕನ ಮೇಲೆ ಹಲ್ಲೆ ಮಾಡಿದ ಪೊಲೀಸರು ; ಕೇಸ್ ದಾಖಲಿಸಿಕೊಳ್ಳದೆ ಕಾನೂನು ಉಲ್ಲಂಘನೆ!

ಕುಡಿದ ಆಮಲಿನಲ್ಲಿದ್ದ ಮೂವರು ಪೊಲೀಸರು, “ನೀನು ಯಾವ ಸೀಮೆ ಡ್ರೈವರ್ ___*****” ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೇ, ಚಾಲಕನ ಕೈ, ಕಾಲು ಸೇರಿದಂತೆ ಗುಪ್ತಾಂಗದ ಜಾಗಕ್ಕೆ ಒದ್ದು, ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ.

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.