ಈಶ್ವರಪ್ಪ ಬಿಜೆಪಿಯಿಂದ ‘ಹಲಾಲ್’ ಆದ ಮೊದಲ ವ್ಯಕ್ತಿ : ಸತೀಶ್ ಜಾರಕಿಹೊಳಿ!

eshwarappa

ಬಿಜೆಪಿ(BJP) ಪಕ್ಷದಿಂದ ಕೆ.ಎಸ್ ಈಶ್ವರಪ್ಪ(KS Eshwarappa) ಮೊದಲ ಹಲಾಲ್(Halal) ಆಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಚಿವರು ಹಲಾಲ್ ಆಗಲಿದ್ದಾರೆ ಎಂದು ಕಾಂಗ್ರೆಸ್(Congress) ನಾಯಕ ಸತೀಶ್ ಜಾರಕಿಹೊಳಿ(Sathish Jarkiholi) ವ್ಯಂಗ್ಯವಾಡಿದ್ದಾರೆ.

ಬೆಳಗಾವಿಯಲ್ಲಿ(Belagavi) ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಾವಿರಾರೂ ಕೋಟಿ ರೂಪಾಯಿಗಳ ಭ್ರಷ್ಟಾಚಾರ(Corruption) ನಡೆದಿದೆ. ಸದ್ಯ ಕೆ.ಎಸ್ ಈಶ್ವರಪ್ಪ ಮಾತ್ರ ಹಲಾಲ್ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಸರತಿಯಲ್ಲಿ ಹಲಾಲ್ ಕಾರ್ಯ ನಡೆಯಲಿದೆ. ಸರ್ಕಾರದ ಅನೇಕ ಸಚಿವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಸರ್ಕಾರ ಎಲ್ಲಕ್ಕೂ 40% ಕಮಿಷನ್ ಕೇಳುತ್ತಿದೆ. ಸರ್ಕಾರದ ಅನೇಕ ಸಚಿವರು ಕಮಿಷನ್ ಇಲ್ಲದೇ ಕೆಲಸ ಮಾಡುತ್ತಿಲ್ಲ.

ಇನ್ನು ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಿದರೆ ಸಾಲದು, ಅವರನ್ನು ಬಂಧಿಸುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು. ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ 40% ಕಮಿಷನ್ ಇದೆ. ಕೋವಿಡ್ ಸಮಯದಲ್ಲಿ ಸಾವಿರಾರೂ ಕೋಟಿ ಲೂಟಿ ಮಾಡಿದ್ದಾರೆ. ಜನರ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಆದರೆ ಈ ಕುರಿತು ದೂರು ಕೊಡಲು ಜನರು ಮುಂದೆ ಬರುತ್ತಿಲ್ಲ. ಹೀಗಾಗಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಸರ್ಕಾರದ ವಿರುದ್ದ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆ.

ಇನ್ನು ಬಿಜೆಪಿ ನಾಯಕರು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಬೆಂಬಲವೂ ಇದೆ. ರಾಜ್ಯದಲ್ಲಿ ಇಷ್ಟೆಲ್ಲಾ ಹಗರಣಗಳು ನಡೆಯುತ್ತಿದ್ದರು ಪ್ರಧಾನಿಗಳು ಸುಮ್ಮನೆ ಕುಳಿತಿದ್ದಾರೆ. ಇನ್ನು ಕೇಂದ್ರ ಸರ್ಕಾರದ ನೀತಿಗಳಿಂದ ದೇಶದ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದೆ. ಆರ್ಥಿಕ ತಜ್ಞರು ಈಗಾಗಲೇ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಶೀಘ್ರವೇ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕೆಂದು ಕರೆ ನೀಡಿದರು.

Exit mobile version