ನವದೆಹಲಿ, ಅ. 13: ದೇಶದ ಅತಿದೊಡ್ಡ ಸಾರ್ವಜನಿಕ ವಲಯವೆಂದೇ ಗುರುತಿಸಿಕೊಂಡಿರುವ ಬ್ಯಾಂಕ್ ಸ್ಟೇಟ್ ಸ್ಟೇಟ್ ಆಫ್ ಇಂಡಿಯಾದ (ಎಸ್ಬಿಐ) ಎಲ್ಲಾ ಆನ್ಲೈನ್ ಬ್ಯಾಂಕಿಂಗ್ ಸೇವೆಗಳು ಇಂದು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಎಟಿಎಂ ಸೇವೆಗಳು ಮತ್ತು ಪಿಓಎಸ್ ಯಂತ್ರಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಎಸ್ಬಿಐ ತಿಳಿಸಿದೆ.
ಈ ಮಾಹಿತಿಯನ್ನ ಟ್ವಿಟ್ಟರ್ ಮೂಲಕ ಹಂಚಿಕೊಂಡಿರುವ ಎಸ್ಬಿಐ, ‘ನಮ್ಮ ಗ್ರಾಹಕರು ನಮ್ಮೊಂದಿಗೆ ಇರಬೇಕೆಂದು ನಾವು ವಿನಂತಿಸುತ್ತಿದ್ದೇವೆ. ಶೀಘ್ರದಲ್ಲೇ ಸಾಮಾನ್ಯ ಸೇವೆ ಎಂದಿನಂತೆ ಪುನರಾರಂಭಗೊಳ್ಳುತ್ತದೆ ಎಂದು ಬ್ಯಾಂಕ್ ತಿಳಿಸಿದೆ.