ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು State Bank of India 48 ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಂಕ್ಷಿಗಳು ಎಸ್ಬಿಐನ ಅಧಿಕೃತ ವೆಬ್ಸೈಟ್ https://sbi.co.in/web/careers ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 05/02/2022 | |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25/02/2022 ವಿದ್ಯಾರ್ಹತೆ : ಯಾವುದೇ ಪದವಿ ಉದ್ಯೋಗದ ಸ್ಥಳ : ಮುಂಬೈ ಹುದ್ದೆಯ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್ ಅಸಿಸ್ಟೆಂಟ್ ಮ್ಯಾನೇಜರ್(ನೆಟ್ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್)- 15 ಅಸಿಸ್ಟೆಂಟ್ ಮ್ಯಾನೇಜರ್(ರೂಟಿಂಗ್ & ಸ್ವಿಚ್ಚಿಂಗ್)-33 ಒಟ್ಟು – 48 ಹುದ್ದೆಗಳು |
ವಿದ್ಯಾರ್ಹತೆ:
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ:
ಅಸಿಸ್ಟೆಂಟ್ ಮ್ಯಾನೇಜರ್(ನೆಟ್ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್)- 40 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್(ರೂಟಿಂಗ್ & ಸ್ವಿಚ್ಚಿಂಗ್)- 40 ವರ್ಷ
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಟೆಸ್ಟ್
ಸ್ಕ್ರೀನಿಂಗ್
ವೈಯಕ್ತಿಕ ಸಂದರ್ಶನ