SBI ನಲ್ಲಿ 1226 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ ಡಿ 28 : ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದಲ್ಲಿ CBO ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. 1226 ಹುದ್ದೆಗಳನ್ನ ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 29ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ: SBI CBO ನೇಮಕಾತಿ 2021ರ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸ್ನಾತಕೋತ್ತರ ಪದವಿಯನ್ನ ಹೊಂದಿರಬೇಕು.

ವಯಸ್ಸಿನ ಮಿತಿ: ಅಭ್ಯರ್ಥಿಯ ವಯಸ್ಸು 1ನೇ ಡಿಸೆಂಬರ್ 2021ರಂತೆ 21 ವರ್ಷಗಳಿಗಿಂತ ಕಡಿಮೆಯಿರಬಾರದು ಮತ್ತು 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಯು 2 ಡಿಸೆಂಬರ್ 1991ಕ್ಕಿಂತ ಮೊದಲು ಮತ್ತು 1 ಡಿಸೆಂಬರ್ 2000ಕ್ಕಿಂತ ನಂತರ ಜನಿಸಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳು, SC, ST, OBC, ದಿವ್ಯಾಂಗ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಮೂರು ಹಂತಗಳಲ್ಲಿ ನೇಮಕಾತಿ ನಡೆಯಲಿದೆ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ, ಸ್ಕ್ರೀನಿಂಗ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ

ನೋಂದಾಯಿಸುವುದು ಹೇಗೆ?
* ಅಭ್ಯರ್ಥಿಗಳು CBO ನೇಮಕಾತಿಯ ಅಧಿಕೃತ ವೆಬ್‌ಸೈಟ್ sbi.co.in ಅಥವಾ sbi.co.in/ careerಗೆ ಭೇಟಿ ನೀಡಬೇಕು.
* ಅರ್ಜಿದಾರರಾಗಿ ನೋಂದಾಯಿಸಲು SBI CBO ನೇಮಕಾತಿ ಜಾಹೀರಾತಿನ ಮೇಲೆ ಕ್ಲಿಕ್ ಮಾಡಿ.
* ನೋಂದಣಿ ನಂತರ ರಚಿಸಲಾದ ಬಳಕೆದಾರ ID ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ.
* ಎಲ್ಲಾ ವಿವರಗಳನ್ನು ನೀಡುವ ಮೂಲಕ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಅರ್ಜಿ ಶುಲ್ಕವನ್ನು ಪಾವತಿಸಿ, ಸಲ್ಲಿಸು ಕ್ಲಿಕ್ ಮಾಡಿ
ಅದರ ನಂತರ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ತೆಗೆದುಕೊಳ್ಳಲು ಮರೆಯಬೇಡಿ.

ಅರ್ಜಿ ಶುಲ್ಕ: SBI CBO ನೇಮಕಾತಿ 2021 ಅರ್ಜಿ ಶುಲ್ಕವು ಸಾಮಾನ್ಯ ವರ್ಗ/ಇತರ ವರ್ಗದ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ. 750, ಆದರೆ SC/ST/PWBD ಅಡಿಯಲ್ಲಿ ಅರ್ಜಿ ಸಲ್ಲಿಸುವವರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ

Exit mobile version