ಚುನಾವಣಾ ಬಾಂಡ್‌ ಯೋಜನೆ ಅಸಾಂವಿಧಾನಿಕ ಎಂದು ತೀರ್ಪು ನೀಡಿದ ಸುಪ್ರೀಂ ಕೋರ್ಟ್ .

New Delhi: ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡಬಹುದಾದ ಚುನಾವಣಾ ಬಾಂಡ್‌ (SC Declares Electrol Bond) ಯೋಜನೆಯು (Electoral

Bonds) ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಸಂವಿಧಾನ ನೀಡಿರುವ ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆಯಾಗುವುದರಿಂದ ಚುನಾವಣಾ

ಬಾಂಡ್‌ ಯೋಜನೆಯು ಅಸಾಂವಿಧಾನಿಕವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ (D Y Chandrachud) ಅವರನ್ನೊಳಗೊಂಡ ಪಂಚ ನ್ಯಾಯಮೂರ್ತಿಗಳ

ಸಾಂವಿಧಾನಿಕ ಪೀಠವು ತೀರ್ಪು ನೀಡಿದೆ. ಇದರಿಂದ ಕೇಂದ್ರ (SC Declares Electrol Bond) ಸರ್ಕಾರಕ್ಕೆ ಭಾರಿ ಹಿನ್ನಡೆಯಾದಂತಾಗಿದೆ.

“ಚುನಾವಣಾ ಬಾಂಡ್‌ ಯೋಜನೆಯು ಸಂವಿಧಾನದ 19 (1) (A) ವಿಧಿ ಅಡಿಯಲ್ಲಿ ನೀಡಲಾದ ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಇದರಿಂದ ಕೊಡು-ಕೊಳ್ಳುವ

ವ್ಯವಹಾರಕ್ಕೆ ಪುಷ್ಟಿ ನೀಡುತ್ತದೆ. ಹಾಗೆಯೇ, ಕಂಪನಿಗಳ ಕಾಯ್ದೆಗೆ ತಿದ್ದುಪಡಿ ತಂದಿರುವುದು ಅಸಾಂವಿಧಾನಿಕವಾಗಿದೆ. ರಾಜಕೀಯ ಪಕ್ಷಗಳು ಪಡೆಯುವ ದೇಣಿಗೆಯ ಮೂಲ ತಿಳಿಯುವ

ಹಕ್ಕು ದೇಶದ ನಾಗರಿಕರಿಗೆ ಇದೆ” ಎಂದು ನ್ಯಾಯಾಲಯ ತಿಳಿಸಿತು.

ಚುನಾವಣಾ ಬಾಂಡ್ ಎಂದರೇನು?
ಇದು ಜನಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮವಾಗಿದೆ. 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ,

1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದು. ಈ ಬಾಂಡ್​ಗಳು (Bond) ಅನಾಮಧೇಯವಾಗಿರುತ್ತವೆ. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ

ಸಂಸ್ಥೆಯ ಹೆಸರು ಬಹಿರಂಗ ಇರುವುದಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗ ಇರುವುದಿಲ್ಲ.

ಚುನಾವಣಾ ಬಾಂಡ್ ಖರೀದಿಸಿದರೆ ಆ ಹಣಕ್ಕೆ ತೆರಿಗೆ ವಿನಾಯಿತಿ ಸಿಕ್ಕುತ್ತದೆ. ರಾಜಕೀಯ ಪಕ್ಷಗಳು ಆದಾಯ ತೆರಿಗೆ ಕಟ್ಟುವ ಅವಶ್ಯಕತೆ ಇರುವುದಿಲ್ಲ. ಆದರೆ, ಎಲೆಕ್ಟೋರಲ್ ಬಾಂಡ್

ವಿತರಣೆ ಮಾಡುವ ಎಸ್​ಬಿಐ (SBI), ಇದಕ್ಕೆ ಸರ್ಕಾರದಿಂದ ನಿರ್ದಿಷ್ಟ ಶುಲ್ಕ ಪಡೆಯುತ್ತದೆ.

ಏನಿದು ಯೋಜನೆ?
ಜನವರಿ (January) 2, 2018 ರಂದು ಈ ಯೋಜನೆಗೆ ಅಧಿಸೂಚನೆ ಹೊರಡಿಸಿತ್ತು ಇದರ ಪ್ರಕಾರ, ಭಾರತದ ಯಾವುದೇ ನಾಗರಿಕ ಅಥವಾ ದೇಶದಲ್ಲಿ ಸ್ಥಾಪಿಸಲಾದ ಯಾವುದೇ

ಘಟಕದಿಂದ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು. ಯಾವುದೇ ವ್ಯಕ್ತಿ ಏಕಾಂಗಿಯಾಗಿ ಅಥವಾ ಇತರ ವ್ಯಕ್ತಿಗಳೊಂದಿಗೆ ಜಂಟಿಯಾಗಿ ಚುನಾವಣಾ ಬಾಂಡ್‌ಗಳನ್ನು

ಖರೀದಿಸಬಹುದು.ಜನತಾ ಪ್ರಾತಿನಿಧ್ಯ ಕಾಯಿದೆ, 1951 ರ ಸೆಕ್ಷನ್ 29A ಅಡಿಯಲ್ಲಿ ನೋಂದಾಯಿಸಲಾದ ಅಂತಹ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್‌ಗಳಿಗೆ ಅರ್ಹವಾಗಿವೆ.

ಒಂದೇ ಷರತ್ತು ಎಂದರೆ ಜನತಾ ಪ್ರಾತಿನಿಧ್ಯ ಕಾಯಿದೆ 1951 ರ ಸೆಕ್ಷನ್ (Section) 29A ಅಡಿಯಲ್ಲಿ ನೋಂದಾಯಿಸಲ್ಪಟ್ಟ ಮತ್ತು ಕಳೆದ ಲೋಕಸಭೆ ಅಥವಾ ವಿಧಾನಸಭೆ

ಚುನಾವಣೆಯಲ್ಲಿ ಶೇಕಡಾ ಒಂದಕ್ಕಿಂತ ಹೆಚ್ಚು ಮತಗಳನ್ನು ಪಡೆದ ರಾಜಕೀಯ ಪಕ್ಷಗಳು ಮಾತ್ರ ಈ ಬಾಂಡ್‌ಗಳನ್ನು ಪಡೆಯಬಹುದು. ಅಧಿಕೃತ ಬ್ಯಾಂಕ್‌ನೊಂದಿಗೆ ಅದರ

ಖಾತೆಯ ಮೂಲಕ ಮಾತ್ರ ಎನ್‌ಕ್ಯಾಶ್ (En-cash) ಮಾಡಬೇಕು ಎಂದು ಹೇಳಲಾಗಿತ್ತು.

Exit mobile version