2 ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ!

BBMP

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಚುನಾವಣೆಯನ್ನು ಇನ್ನು 8 ವಾರದೊಳಗೆ ನಡೆಸುವಂತೆ ಸುಪ್ರೀಂಕೋರ್ಟ್(Supreme Court) ಆದೇಶ ಹೊರಡಿಸಿದೆ.

ಈ ಕುರಿತಂತೆ ಶುಕ್ರವಾರ ಮೇ 20 ರಂದು ಸುಪ್ರೀಂಕೋರ್ಟ್ ಚುನಾವಣೆ ನಡೆಸಲು ಸೂಚಿಸಿದೆ. ನ್ಯಾ. ಕ್ಯಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ವಾರ್ಡ್‍ಗಳ ಪುನರ್ ವಿಂಗಡಣೆ ಮತ್ತು ಓಬಿಸಿ ಸೀಟುಗಳ ನಿರ್ಧಾರಕ್ಕೆ 8 ವಾರಗಳ ಸಮಯ ಬೇಕು ಎಂದು ಸುಪ್ರೀಂ ಕೋರ್ಟ್‍ಗೆ ರಾಜ್ಯ ಸರ್ಕಾರ ಮಾಹಿತಿ ತಲುಪಿಸಿತು.

ಸುಪ್ರೀಂ ಕೋರ್ಟ್‍ನಲ್ಲಿ ಆಡಳಿತ ಪಕ್ಷದ ಮಾಜಿ ನಾಯಕರಾದ ಎಮ್.ಶಿವರಾಜು ಅವರು ಚುನಾವಣೆ ನಡೆಸಲು ಅರ್ಜಿ ಸಲ್ಲಿಸಿದ್ದರು, ಅರ್ಜಿಯ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಇನ್ನು 8 ವಾರದೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.

Exit mobile version