• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನೀಟ್ ಪರೀಕ್ಷೆಯಲ್ಲಿ ಅಕ್ರಮ: ಎನ್‌ಟಿಎ ಹಾಗೂ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
Job Vacancy In SC Kannada Live Update

Job Vacancy In SC Kannada Live Update

0
SHARES
109
VIEWS
Share on FacebookShare on Twitter

Dehli: ನೀಟ್ ಪರೀಕ್ಷೆಯ ನಿರ್ವಹಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) ಮಂಗಳವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ವೈದ್ಯಕೀಯ ಆಕಾಂಕ್ಷಿಗಳು ಮತ್ತು ಅವರ ಪೋಷಕರು ನೀಟ್ ಪರೀಕ್ಷೆ (NEET Exam) ಯಲ್ಲಿನ ಅಕ್ರಮ ಬಗ್ಗೆ ಪ್ರತಿಭಟನೆಯ ದನಿಯೆತ್ತಿದ್ದು, ಸುಪ್ರೀಂಕೋರ್ಟ್, ಸಣ್ಣ ನಿರ್ಲಕ್ಷ್ಯವನ್ನು ಸಹ ಕಡೆಗಣಿಸಬಾರದು ಎಂದು ಹೇಳಿದೆ. ನೀಟ್ ವೈದ್ಯಕೀಯ ಮತ್ತು ಸಂಬಂಧಿತ ಶೈಕ್ಷಣಿಕ ಕ್ಷೇತ್ರಗಳಿಗೆ ಭಾರತದ ಮುಖ್ಯ ಪ್ರವೇಶ ಪರೀಕ್ಷೆಯಾಗಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಪ್ರತಿ ವರ್ಷ ಪರೀಕ್ಷೆಯನ್ನು ನಡೆಸುತ್ತದೆ.

ತಿಂಗಳ ಆರಂಭದಲ್ಲಿ, 20 ವೈದ್ಯಕೀಯ ಆಕಾಂಕ್ಷಿಗಳ ಗುಂಪು 2024 ರ ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮತ್ತು ಸಿಬಿಐ ಅಥವಾ ಸ್ವತಂತ್ರ ಏಜೆನ್ಸಿಗಳಿಂದ ಆಪಾದಿತ ಅಕ್ರಮಗಳ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿತ್ತು. ಎನ್‌ಟಿಎ (NTA) ಮತ್ತು ಕೇಂದ್ರಕ್ಕೆ ನೋಟಿಸ್‌ಗಳನ್ನು ನೀಡಿದ ನ್ಯಾಯಾಲಯ, ಶೇಕಡಾ 0.001 ನಿರ್ಲಕ್ಷ್ಯ ಆಗಿದ್ದರೂ ಸಹ ಅದನ್ನು ಸಂಪೂರ್ಣವಾಗಿ ಪರಿಹರಿಸಬೇಕು ಎಂದು ಹೇಳಿದೆ.”ಯಾವುದೇ ಕಡೆಯಿಂದ 0.001% ನಿರ್ಲಕ್ಷ್ಯ ಸಂಭವಿಸಿದ್ದರೂ ಕೂಡಾ ಅದನ್ನು ಸಂಪೂರ್ಣವಾಗಿ ವ್ಯವಹರಿಸಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ದೇಶದ ಅತ್ಯಂತ ಕಠಿಣ ಪ್ರವೇಶ ಪರೀಕ್ಷೆಗಳಿಗೆ ತಯಾರಿ ನಡೆಸಲು ವೈದ್ಯಕೀಯ ಆಕಾಂಕ್ಷಿಗಳು ತೊಡಗಿಸಿಕೊಂಡಿರುವುದನ್ನು ಮರೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ. “ಮಕ್ಕಳು ಪರೀಕ್ಷೆಗೆ ತಯಾರಿ ನಡೆಸಿದ್ದಾರೆ, ಅವರ ಶ್ರಮವನ್ನು ನಾವು ಮರೆಯಲು ಸಾಧ್ಯವಿಲ್ಲ”. ಈ ಬಗ್ಗೆ ಸಕಾಲಿಕ ಕ್ರಮವನ್ನು ಸುಪ್ರೀಂ ಕೋರ್ಟ್ ನಿರೀಕ್ಷಿಸುತ್ತದೆ ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ (Vikram Nath) ಎನ್‌ಟಿಎಗೆ ತಿಳಿಸಿದ್ದು ಜುಲೈ 8 ರಂದು ಅರ್ಜಿಗಳ ವಿಚಾರಣೆ ನಡೆಯಲಿದೆ.

Central Govt

ಮೇ 5 ರಂದು ಭಾರತದ 571 ನಗರಗಳಲ್ಲಿ 4,750 ಕೇಂದ್ರಗಳಲ್ಲಿ NEET-UG ಪರೀಕ್ಷೆಯನ್ನು ನಡೆಸಲಾಯಿತು. ಜೂನ್ 4ರಂದು ಫಲಿತಾಂಶ ಪ್ರಕಟವಾಗಿತ್ತು. ಆದರೆ, ಫಲಿತಾಂಶ ಪ್ರಕಟವಾದ ನಂತರ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿರುವ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ ನಂತರ ನೀಟ್ ವಿವಾದ ಮುನ್ನೆಲೆಗೆ ಬಂದಿತ್ತು. ಏತನ್ಮಧ್ಯೆ, ಗ್ರೇಸ್ ಅಂಕ (Grace Marks) ಗಳನ್ನು ಪಡೆದವರಿಗೆ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಸಂಸ್ಥೆ ಈ ತಿಂಗಳ ಆರಂಭದಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜೂನ್ 23 ಈ ವಿದ್ಯಾರ್ಥಿಗಳಿಗೆ ರಂದು ಮತ್ತೊಮ್ಮೆ ಪರೀಕ್ಷೆ ಬರೆಯಲು ಅನುಮತಿಸಲಾಗುವುದು ಮತ್ತು ಜೂನ್ 30 ರ ಮೊದಲು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಅದು ಹೇಳಿದೆ.

ಎನ್‌ಟಿಎ ಅಧಿಕಾರಿಗಳು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ನಡೆಸುವಲ್ಲಿ ಅಕ್ರಮ ಎಸಗಿರುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ಶಿಫಾರಸಿನ ಮೇರೆಗೆ 1,563 ಅಭ್ಯರ್ಥಿಗಳ ಮರು ಪರೀಕ್ಷೆಗೆ ಆದೇಶ ನೀಡಲಾಗಿದೆ. ಎರಡು ಸ್ಥಳಗಳಲ್ಲಿ ಕೆಲವು ಅಕ್ರಮಗಳು ಬೆಳಕಿಗೆ ಬಂದಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ನಾನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಭರವಸೆ ನೀಡುತ್ತೇನೆ” ಎಂದು ಪ್ರಧಾನ್ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

Tags: ExamNEETNTAsupreme court

Related News

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್
ದೇಶ-ವಿದೇಶ

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್

April 22, 2026
ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.