5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸಬೇಡಿ – ಸುಪ್ರೀಂಕೋರ್ಟ್

New Delhi: ಕಳೆದ ತಿಂಗಳು ಹೈಕೋರ್ಟ್ನ ದ್ವಿಸದಸ್ಯ ಪೀಠ ನೀಡಿದ್ದ ಆದೇಶದನ್ವಯ ರಾಜ್ಯದಲ್ಲಿ ನಡೆಸಲಾಗಿದ್ದ 5,8 ಮತ್ತು 9ನೇ ತರಗತಿಗಳಿಗೆ ನಡೆಸಲಾಗಿದ್ದ ಪಬ್ಲಿಕ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂಕೋರ್ಟ್ (Supreme Court) ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರಕ್ಕೆ ನೋಟಿಸ್ ಕೂಡ ಜಾರಿಗೊಳಿಸಿದೆ.

ಇನ್ನು 5,8 ಹಾಗೂ 9ನೇ ತರಗತಿಯ ಪಬ್ಲಿಕ್ ಪರೀಕ್ಷೆಗೆ ಅನುಮತಿ ನೀಡಿದ್ದ ಹೈಕೋರ್ಟ್ನ (High Court) ದ್ವಿಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ, ರುಪ್ಸಾ, ಅವರ್ ಸ್ಕೂಲ್, ಹಾಗೂ ಪೋಷಕರ ಸಂಘಟನೆಗಳ ಒಕ್ಕೂಟ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪರೀಕ್ಷೆಯ ಫಲಿತಾಂಶ ಪ್ರಕಟಿಸಿದಂತೆ ರಾಜ್ಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.

ಈ ಮಧ್ಯೆ 5,8 ಮತ್ತು 9ನೇ ತರಗತಿಗಳ ಫಲಿತಾಂಶವನ್ನು ಬೆಳಗ್ಗೆ 10 ಗಂಟೆಗೆ ಅನೇಕ ಶಾಲೆಗಳು ಪ್ರಕಟ ಮಾಡಿವೆ. ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಪರೀಕ್ಷೆಯ ಫಲಿತಾಂಶ ರವಾನೆ ಮಾಡಲಾಗಿದೆ. ಆದರೆ ಶಾಲಾ ಆಡಳಿತ ಮಂಡಳಿಗಳು ಶಿಕ್ಷಣ ಇಲಾಖೆಗೆ (Education Department) ಪರೀಕ್ಷೆಯ ಮಾಹಿತಿ ಅಪ್ಲೋಡ್ ಮಾಡಬೇಕಿದೆ.

ಈ ಬಾರಿ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಹಂತದ ಪರೀಕ್ಷೆಗೆ ಸಂಬಂಧಿಸಿದಂತೆ ಸಾಕಷ್ಟು ಗೊಂದಲ ಉಂಟಾಗಿದ್ದು, 5,8 ಮತ್ತು 9ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ನಡೆಸದಂತೆ ಹೈಕೋರ್ಟ್ನ ಏಕಸದಸ್ಯ ಪೀಠ ಆದೇಶ ನೀಡಿತ್ತು. ನಂತರ ರಾಜ್ಯದ ದ್ವಿಸದಸ್ಯ ಪೀಠಕ್ಕೆ ಮನವಿ ಸಲ್ಲಿಸಿದ ನಂತರ, ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಆದರೆ ಇದೀಗ ಪರೀಕ್ಷೆಯ ನಂತರ ಫಲಿತಾಂಶ ಪ್ರಕಟಣೆಗೆ ಸುಪ್ರೀಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಮತ್ತಷ್ಟು ಗೊಂದಲ ಉಂಟಾಗಿದೆ. ಲೋಕಸಭಾ ಚುನಾವಣೆ (Loksabha Election) ಇರುವುದರಿಂದ ರಾಜ್ಯ ಸರ್ಕಾರ ಈ ಕುರಿತು ಹೆಚ್ಚಿನ ಗಮನ ಹರಿಸುತ್ತಿಲ್ಲ ಎಂಬ ಟೀಕೆ ವ್ಯಕ್ತವಾಗಿದೆ.

Exit mobile version