New Delhi: ಕಾವೇರಿ (Kaveri) ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮರುಪರಿಶೀಲನಾ ಅರ್ಜಿಸಿದ ನಂತರ ಕರ್ನಾಟಕಕ್ಕೆ #Karnataka ಇದೀಗ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನಡೆ ಉಂಟಾಗಿದೆ. ತಮಿಳುನಾಡು @Tamilnadu ಮತ್ತು ಕರ್ನಾಟಕ ರಾಜ್ಯಗಳ ವಾದ ಆಲಿಸಿದ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ತಮಿಳುನಾಡಿಗೆ ಮುಂದಿನ 15 ದಿನ ಪ್ರತಿದಿನವೂ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಇಂದು ಆದೇಶ ಹೊರಡಿಸಿದೆ. ಈ ಆದೇಶದಿಂದ ಕರ್ನಾಟಕಕ್ಕೆ ತೀವ್ರ ಹಿನ್ನಡೆಯುಂಟಾಗಿದೆ.

ಸುಪ್ರೀಂಕೋರ್ಟ್ (Supreme Court) ನ್ಯಾಯಮೂರ್ತಿ ಬಿ.ಆರ್. ಗವಾಯಿ (B R Gawai) ಅವರ ನೇತೃತ್ವದ ತ್ರಿಸದಸ್ಯ ಪೀಠವು ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಆದೇಶ ಹೊರಡಿಸಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣಾ ಸಮಿತಿ ಈ ಹಿಂದೆ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಇದಕ್ಕೂ ಮುನ್ನ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶ ನೀಡಿತ್ತು. ಇದೇ ಆದೇಶವನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯೂ ಕೂಡಾ ಅನುಮೋದಿಸಿತ್ತು. ಆದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿದ್ದ ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶಕ್ಕೆ ತಡೆ ನೀಡಬೇಕೆಂದು ಮನವಿ ಮಾಡಿತ್ತು. ಆದರೆ ಕರ್ನಾಟಕದ ವಾದವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಇದೀಗ ಕರ್ನಾಟಕ ಅನಿವಾರ್ಯವಾಗಿ ಮುಂದಿನ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ಹರಿಸಲೇಬೇಕಾದ ಸಂಕಷ್ಟಕ್ಕೆ ಸಿಲುಕಿದೆ.
ದೆಹಲಿಯಲ್ಲಿ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ (C M Siddaramaiah), ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ (TMC) ನೀರು ನಮಗೆ ಅನಿವಾರ್ಯವಾಗಿ ಬೇಕಿದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ. ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ (August) ಬಳಿಕ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ ಎಂದು ಹೇಳಿದ್ದರು.