ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ: ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ತಾತ್ಕಾಲಿಕ ರಿಲೀಫ್‌

New Delhi: ಕರ್ನಾಟಕ (SC Relief for Siddaramaiah) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರಿಗೆ ಸುಪ್ರೀಂ ಕೋರ್ಟ್​​ನಲ್ಲಿ (Supreme Court)

ತುಸು ರಿಲೀಫ್ ಸಿಕ್ಕಿದ್ದು, ಪ್ರತಿಭಟನೆ ವೇಳೆ ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೂ

ತಡೆಯಾಜ್ಞೆ ನೀಡಿರುವ ನ್ಯಾಯಾಲಯ, ಪ್ರತಿವಾದಿಗಳಿಗೆ 6 ವಾರಗಳಲ್ಲಿ ಉತ್ತರಿಸಲು ಸೂಚನೆ ಹೊರಡಿಸಿದೆ.

ಸಿದ್ದರಾಮಯ್ಯ #siddaramaiah ಅವರು 2022ರಲ್ಲಿ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ (K S Eshwarappa) ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ

ವಿರುದ್ಧ ಕೇಸ್ ದಾಖಲಾಗಿದ್ದು, ಹೈಕೋರ್ಟ್ (High court) 10 ಸಾವಿರ ರೂಪಾಯಿ ದಂಡ ವಿಧಿಸಿತ್ತು. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದ ಕೋರ್ಟ್‌

ವಿಚಾರಣೆಗೆ ಹಾಜರಾಗಲು (SC Relief for Siddaramaiah) ಆದೇಶ ನೀಡಿತ್ತು.

ಪ್ರತಿಭಟನೆಯಿಂದ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಕಾಂಗ್ರೆಸ್ (Congress) ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದೊಂದು ಶಾಂತಿಯುತ ಪ್ರತಿಭಟನೆಯಾಗಿತ್ತು.

ಇದೊಂದು ‘ರಾಜಕೀಯ ಪ್ರತಿಭಟನೆ’ಯಾಗಿತ್ತು. ಇದರ ವಿರುದ್ಧ ಕ್ರಿಮಿನಲ್ (Criminal) ಮೊಕದ್ದಮೆ ದಾಖಲಿಸಿರುವುದು ಸಂವಿಧಾನದ 19(1)(ಎ) ವಿಧಿಯಡಿ ಪ್ರತಿಭಟಿಸುವ ಹಕ್ಕಿನ

ಉಲ್ಲಂಘನೆಯಾಗಿದೆ.

ಯಾವುದೇ ಕ್ರಿಮಿನಲ್ ಉದ್ದೇಶವಿಲ್ಲದೆ ಶಾಂತಿಯುತವಾಗಿ ನಡೆಸಿದ ರಾಜಕೀಯ ಪ್ರತಿಭಟನೆಯನ್ನು ದಂಡದ ನಿಬಂಧನೆಗಳನ್ನು ಬಳಸಿ ನಿಯಂತ್ರಿಸುವುದು ಸರಿಯಲ್ಲ ಎಂದು ಕಪಿಲ್

ಸಿಬಲ್ (Kapil Sibal) ವಾದ ಮಂಡನೆ ಮಾಡಿದರು.

ಇನ್ನು ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು, ರಾಜಕೀಯ ಪಕ್ಷಗಳ ಪ್ರತಿಭಟನೆ ಎಂದ ಕೂಡಲೆ ಕೇಸ್ (Case) ವಜಾ ಮಾಡಬೇಕೇ ಎಂದು ಪ್ರಶ್ನಿಸಿತು. ಅಷ್ಟೇ ಅಲ್ಲದೆ, ನೀವು

ಪ್ರತಿಭಟನೆಗೆ ಅನುಮತಿ ಪಡೆದಿದ್ದೀರೇ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಸಿಬಲ್, ಪ್ರತಿಭಟಿಸುವುದು ಮೂಲಭೂತ ಹಕ್ಕು. ಪ್ರತಿಭಟಿಸುವುದು ಅಪರಾಧವಲ್ಲ ಎಂದು ವಾದ

ಮಂಡಿಸಿದರು.

ಇದನ್ನು ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ: ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ತಾತ್ಕಾಲಿಕ ರಿಲೀಫ್‌

Exit mobile version