ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ವಿಚಾರ – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

New Delhi : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ(Kashmir) ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯ (SC-upheld central governments decision) ವಿಶೇಷ ಸ್ಥಾನಮಾನವನ್ನು ರದ್ದು

ಪಡಿಸಿದ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ (Central Govt) ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಐತಿಹಾಸಿಕ ತೀರ್ಪು ನೀಡಿದೆ. ಅಲ್ಲದೇ 2024ರ ಸೆಪ್ಟೆಂಬರ್

30ರ ಒಳಗಡೆ ಒಳಗಡೆ ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ (SC-upheld central governments decision) ನಡೆಸುವಂತೆ ಚುನಾವಣಾ ಆಯೋಗಕ್ಕೆ ಸೂಚಿನೆ ನೀಡಿದೆ.

ಕಾಶ್ಮೀರಕ್ಕೆ( Kashmir) ನೀಡಲಾಗಿದ್ದ ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ

ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್(Kishan Kaul), ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ

ಸಂವಿಧಾನ ಪೀಠದಿಂದ ಸರ್ವಾನುಮತದ ತೀರ್ಪು ಪ್ರಕಟವಾಗಿದೆ.

ಕಣಿವೆ ರಾಜ್ಯ ಜಮ್ಮು(Jammu) ಮತ್ತು ಕಾಶ್ಮೀರದಲ್ಲಿ(Kashmir)ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ

ಕೋರ್ಟ್ ಕಳೆದ ನಾಲ್ಕು ವರ್ಷಗಳಿಂದ ವಿಚಾರಣೆ ನಡೆಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠ ಇಂದು ಅಂತಿಮ ತೀರ್ಪು ನೀಡಿದೆ.

ಇನ್ನು ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಯಾವುದೇ ಉದ್ವಿಗ್ನತೆ ಮತ್ತು ಸಂಭಾವ್ಯ ಘರ್ಷಣೆಗಳು ನಡೆಯದಂತೆ ಸಿದ್ಧತೆಗಳು ನಡೆಯುತ್ತಿವೆ. ಇನ್ನೂ 370ನೇ ವಿಧಿಯನ್ನು

ಹಿಂತಿರುಗಿಸುವಂತೆ ಕಾಶ್ಮೀರದ ರಾಜಕೀಯ ಪಕ್ಷಗಳು ಒತ್ತಾಯಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸುತ್ತಿವೆ.

ಜಮ್ಮು ಮತ್ತು ಕಾಶ್ಮೀರ(Kashmir) ಮತ್ತು ಲಡಾಖ್(Ladak) ಅನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ 370ನೇ ವಿಧಿ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ

ಕಾಯಿದೆ, 2019ರ ರದ್ದತಿಯನ್ನು ಪ್ರಶ್ನಿಸುವ ಹಲವಾರು ಅರ್ಜಿಗಳನ್ನು 2019ರಲ್ಲಿ ಸಂವಿಧಾನ ಪೀಠಕ್ಕೆ ವರ್ಗಾಯಿಸಲಾಗಿತ್ತು. ಐವರು ನ್ಯಾಯಮೂರ್ತಿಗಳಾದ ಸಿಜೆಐ ಚಂದ್ರಚೂಡ್, ನ್ಯಾಯಮೂರ್ತಿಗಳಾದ

ಎಸ್ ಕೆ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರು 16 ದಿನಗಳ ಕಾಲ ಅರ್ಜಿದಾರರು ಮತ್ತು ಕೇಂದ್ರದ ವಾದವನ್ನು ಆಲಿಸಿದ್ದರು. ಸುಪ್ರೀಂಕೋರ್ಟ್ ಸೆಪ್ಟೆಂಬರ್ 5 ರಂದು

ಈ ಪ್ರಕರಣದ ತೀರ್ಪನ್ನು ಡಿಸೆಂಬರ್ 11 ಕ್ಕೆ ಕಾಯ್ದಿರಿಸಿತ್ತು.

Exit mobile version