- ಇಂಧನ ಸಚಿವ ಕೆಜೆ ಜಾರ್ಜ್ ಗೆ ತಪ್ಪದ ಸ್ಮಾರ್ಟ್ ಮೀಟರ್ ಸಂಕಷ್ಟ
- ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಇಂಧನ ಸಚಿವರ ಅವ್ಯವಹಾರ
- ಪ್ರತ್ಯೇಕ ಟೆಂಡರ್ ಕರೆಯದೆ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಗುತ್ತಿಗೆ ನೀಡಿದ ಆರೋಪ
Bengaluru: ಕೆಲ ದಿನಗಳ ಹಿಂದಷ್ಟೇ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುವಂತಿಲ್ಲ. ಆದರೆ ಸರ್ಕಾರ ಕಡ್ಡಾಯ ಮಾಡಿದೆ.
ಮೀಟರ್ ದರ ನಿಗದಿಯಲ್ಲೂ ವ್ಯತ್ಯಾಸವಿದೆ. ಹಣ ಮಾಡಲು ಸರ್ಕಾರ ಈ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು
ಆದರೆ ಇದೀಗ ಮತ್ತೆ ಸದ್ದು ಮಾಡ್ತಿದೆ ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್ ಅಕ್ರಮ ಹಗರಣ (Smart Meter Scam) ಇದೀಗ ಹೊಸ ರೂಪ ಪಡೆದುಕೊಂಡಿದೆ.
ಸ್ಮಾರ್ಟ್ ಮೀಟರ್ ಅಳವಡಿಕೆಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದ ಅಧಿಕಾರಿಗಳಿಗೆ ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆ ಮಾಡದೇ ಟೆಂಡರ್ ನೀಡಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಈ ಕುರಿತಾಗಿ ಈ ಹಿಂದೆ ಲೋಕಾಯುಕ್ತಕ್ಕೆ ದೂರು ನೀಡಿದ್ದರೂ ಯಾವುದೇ ರೀತಿಯ ತನಿಖಾ ಪ್ರಗತಿ ಕಾಣದೇ ಇರುವುದರಿಂದ ಇದೀಗ ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗಾಗಿ ನಡೆಸಿದ ಟೆಂಡರ್ ಪೂರ್ತಿಯಾಗಿ ಅಕ್ರಮವಾಗಿದೆ.

ಟೆಂಡರ್ ಪ್ರಕ್ರಿಯೆ ಕೂಡ ಸರಿಯಾಗಿ ನಡೆದಿಲ್ಲ ಎಂಬ ಆರೋಪ ಇರುವುದರಿಂದಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷರು
ಮತ್ತು ಇಂಧನ ಸಚಿವರೂ ಆಗಿರುವ ಕೆ.ಜೆ.ಜಾರ್ಜ್ ವಿರುದ್ಧ ಪಿಸಿಆರ್ ದಾಖಲಿಸಿಕೊಳ್ಳಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಇನ್ನು ಈಗಾಗಲೇ ಹಲವು ದಿನಗಳಿಂದ ಸ್ಮಾರ್ಟ್ ಮೀಟರ್ ಟೆಂಡರ್ ಸುದ್ದಿ ಎಲ್ಲೆಡೆ ಸದ್ದು ಮಾಡಿದ್ದು ಈ ಆರೋಪಕ್ಕೆ ಸಂಬಂಧಿಸಿದ ಹಾಗೆ ಖಾಸಗಿ ದೂರಿನ ವಿಚಾರಣೆ ನಡೆಸುತ್ತಿರುವ
ಶಾಸಕರು ಮತ್ತು ಸಂಸದರ ವಿರುದ್ಧ ಕೂಡ ಕ್ರಿಮಿನಲ್ ಪ್ರಕರಣಗಳ ದಾಖಲಿಸಿ ವಿಚಾರಣೆಗೆ ಒಳಪಡಲು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿರುವ ಸಂತೋಷ ಗಜಾನನ ಭಟ್ ಬುಧವಾರ ಆದೇಶ ಹೊರಡಿಸಿದ್ದಾರೆ.
ಇನ್ನು ಸ್ಮಾರ್ಟ್ ಮೀಟರ್ ಟೆಂಡರ್ ಅಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ನೀಡಿರುವ ದೂರಿನ ಕುರಿತಾದ ವಸ್ತುಸ್ಥಿತಿ ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಿ
ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿರುವ ನ್ಯಾಯಾಧೀಶರು ವಿಚಾರಣೆಯನ್ನು ಮತ್ತಷ್ಟು ದಿನಗಳ ಕಾಲ ಮುಂದೂಡಿದ್ದಾರೆ.
ಇನ್ನು ಈಗಾಗಲೇ ಸಲ್ಲಿಸಿರುವ ದೂರಿನಲ್ಲಿ ಸಚಿವ ಕೆ.ಜೆ.ಜಾರ್ಜ್, ಹಾಗೂ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಗೌರವ ಗುಪ್ತ,
ಹಾಗೂ ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕರಗಿರುವ ಮಹಾಂತೇಶ ಬೀಳಗಿ ಮತ್ತು ಬೆಸ್ಕಾಂನ ತಾಂತ್ರಿಕ ನಿರ್ದೇಶರಾಗಿರುವ ಎಚ್.ಜೆ.ರಮೇಶ್ ಅವರನ್ನು ಆರೋಪಿಗಳನ್ನಾಗಿ ಪರಿಗಣಿಸಿ ದೂರು ನೀಡಲಾಗಿದ್ದು
ಸ್ಮಾರ್ಟ್ ಮೀಟರ್ ಟೆಂಡರ್ ಅವ್ಯವಹಾರದ ಕುರಿತಾಗಿ ಬಿಜೆಪಿಯ ಶಾಸರಾಗಿರುವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಈ ಖಾಸಗಿಯ ದೂರನ್ನು ಸಲ್ಲಿಸಿದ್ದಾರೆ.
ಇನ್ನು ದೂರುದಾರರ ಪರವಾಗಿ ಕೋರ್ಟ್ ನಲ್ಲಿ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದ್ದಾರೆ.
ಸ್ಮಾರ್ಟ್ ಮೀಟರ್ ಅಳವಡಿಸಲು 2024ರ ಸೆಪ್ಟೆಂಬರ್ 26ರಂದು ಟೆಂಡರ್ ಕರೆಯಲಾಗಿತ್ತು.
ಪ್ರಕ್ರಿಯೆ ಕುರಿತಾಗಿ ಎಲ್ಲಿಯೂ ಜಾಹೀರಾತು ನೀಡದೆ ಟೆಂಡರ್ ಪ್ರಕ್ರಿಯೆ ಆರಂಭಿಸದೆ ನೇರವಾಗಿ ಬಿಡ್ದಾರರಾದ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ ಎಂಬ ಶೆಲ್ ಕಂಪನಿಗೆ ಟೆಂಡರ್ ನೀಡಲಾಗಿದೆ.
ಇದು ಕಾನೂನು ಬಾಹಿರವಾದ ಪ್ರಕ್ರಿಯೆಯಾಗಿದ್ದು ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ (KTPP) ಅಧಿನಿಯಮ-2000 ಮತ್ತು
ಇದನ್ನು ಓದಿ : ಇಂದಿನಿಂದ ಮೂರು ದಿನ ಹಾಲು ಹಾಗೂ ಹಾಲಿನ ಉತ್ಪನ್ನ ಮಾರಾಟ ಭಾಗಶಃ ಬಂದ್: ಜುಲೈ 25 ರಂದು ವರ್ತಕರ ಮುಷ್ಕರ
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನಿಯಮಗಳಿಗೆ ವಿರುದ್ಧವಾಗಿರುವುದಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.