Visit Channel

ಆಗಸ್ಟ್ 23 ರಿಂದ ಶಾಲಾ, ಕಾಲೇಜುಗಳು ಆರಂಭ – ಬಸವರಾಜ್ ಬೊಮ್ಮಾಯಿ

203219-925353-bommai

ಬೆಂಗಳೂರು, ಆ. 06: ರಾಜ್ಯಾದ್ಯಂತ ಆಗಸ್ಟ್ 23 ರಿಂದ ಶಾಲಾ ಕಾಲೇಜುಗಳು ಪ್ರಾರಂಭಗೊಳ್ಳಲಿದ್ದು ಮೊದಲ ಹಂತವಾಗಿ 9 ರಿಂದ 12ನೇ ತರಗತಿವರೆಗಿನ ಶಾಲಾ ಕಾಲೇಜುಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಈ ಬಗ್ಗೆ ಮಾತನಾಡಿದ ಅವರು ಮೊದಲ ಹಂತವಾಗಿ  ಒಂದೊಂದು ತರಗತಿಗೂ ಕೂಡ ಹಲವು ಬ್ಯಾಚ್ ಗಳನ್ನು ಮಾಡಿ ಸಾಮಾಜಿಕ ಅಂತರ ಕಾಯ್ದುಕೊಂಡು ಶಾಲೆಗಳನ್ನು ತೆರೆಯಲಾಗುವುದು. ಇದರ ಬಗ್ಗೆ ಈಗಾಗಲೇ ತಜ್ನರ ಜೊತೆಗೆ ಚರ್ಚಿಸಿದ್ದು, 23ರಿಂದ ಮೊದಲ ಹಂತದಲ್ಲಿ 9,10,11 ಮತ್ತು 12ನೇ ತರಗತಿವರೆಗೆ ಶಾಲಾ ಕಾಲೇಜ್ಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ತೀವ್ರತೆಯನ್ನು ಪರಿಶೀಲಿಸಿ 1ರಿಂದ 8ನೇ ತರಗತಿ ವರೆಗಿನ  ಪ್ರಾಥಮಿಕ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಇಗಾಗಲೇ ಪದವಿ ತರಾಗತಿಗಳು ಪ್ರಾರಂಭವಾಗಿದ್ದು ಪಿಯು ಮತ್ತು ಶಾಲೆಗಳನ್ನಯ ತೆರೆಯಲು ಇದೀಗ ಸರ್ಕಾರ ಗ್ರೀನ ಸಿಗ್ನಲ್ ನೀಡಿದೆ.

Latest News

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

Assam
ದೇಶ-ವಿದೇಶ

ತನ್ನ ಪ್ರೀತಿಯನ್ನು ನಿರೂಪಿಸಲು, ಏಡ್ಸ್ ರೋಗವಿರುವ ಪ್ರಿಯಕರನ ರಕ್ತವನ್ನು ತನ್ನ ದೇಹಕ್ಕೆ ಚುಚ್ಚಿಕೊಂಡ 15 ವರ್ಷದ ಹುಡುಗಿ!

ಏಡ್ಸ್ ರೋಗವಿರುವ ತನ್ನ ಹುಡುಗನ ರಕ್ತವನ್ನು ಸೂಜಿಯ ಮೂಲಕ ತನ್ನ ದೇಹಕ್ಕೆ ಚುಚ್ಚಿಕೊಂಡಿದ್ದಾಳಂತೆ! ಇನ್ನೊಂದು ಅಚ್ಚರಿಯ ವಿಷಯ ಎಂದರೆ, ಈಕೆಯ ವಯಸ್ಸು ಕೇವಲ 15 ವರ್ಷ!