ರಾಜ್ಯದಲ್ಲಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಸದ್ಯಕ್ಕೆ ಆರಂಭಿಸುವುದಿಲ್ಲ – ಡಾ. ಸುಧಾಕರ್

ಬೆಂಗಳೂರು ಸೆ 4 : ಕೊರೊನಾ ಸಂಪೂರ್ಣ ತಹಬದಿಗೆ ಬಾರದ ಹಿನ್ನಲೆಯಲ್ಲಿ 1 ರಿಂದ 5 ನೇ ತರಗತಿವರೆಗಿನ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಸದ್ಯೆಕೆ ಯಾವುದೇ ಯೋಜನೆಗಳಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

 ಈ ಬಗ್ಗೆ ಮಾತನಾಡಿದ ಅವರು ಕೇರಳದಲ್ಲಿ ಕೊರೊನಾ ಹೆಚ್ಚಳವಾಗಿದ್ದು ಹಾಗೂ ಅಲ್ಲಿನ ವಿದ್ಯಾರ್ಥಿಗಳಿಂದ ರಾಜ್ಯದಲ್ಲೂ ಕೊರೊನಾ ಹೆಚ್ಚಳವಾಗಿದೆ. ಈಗ ಸದ್ಯಕ್ಕೆ 6ರಿಂದ 8ನೇ ತರಗತಿಗೆ ಭೌತಿಕ ತರಗತಿಗಳನ್ನು ಆಯೋಜಿಸಿದ್ದೇವೆ. ಈ ಪ್ರಾಯೋಗಿಕ ಪ್ರಯತ್ನದಲ್ಲಿ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ 1 ರಿಂದ 5ನೇ ತರಗತಿವರೆಗಿನ ತರಗತಿಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.

ಪರಿಸ್ಥಿತಿ ನೋಡಿ ನಿರ್ಧಾರ : ರಾಜ್ಯದಲ್ಲಿನ ಕೊರೊನಾ ಪರಿಸ್ಥಿತಿ ನೋಡಿ ಮುಂದಿನ ದಿನಗಳಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಕೊರೊನಾ ಪರಿಸ್ಥಿತಿ ಹೇಗೆ ಇರುತ್ತದೆ ಎಂದು ಹೇಳಲಾಗುವುದಿಲ್ಲ ಪರಿಸ್ಥಿತಿ ಅವಲೋಕಿಸಿ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು. ಸಭೆ ಸಮಾರಂಭಗಳಿಗೆ ಕೋವಿಡ್‌ ನಿಯಮದನ್ವಯ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಅವರು ತಿಳಿಸಿದರು.

Exit mobile version