ಹೈದ್ರಾಬಾದ್ : ಬುಧವಾರ ಹೈದರಾಬಾದ್‌ನ ಯೂಸುಫ್‌ಗುಡಾದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ತನ್ನ ಇಬ್ಬರು ಸಹಪಾಠಿಗಳೊಡನೆ ಜಗಳ ಮಾಡಿಕೊಂಡ ಕಾರಣ ಇಬ್ಬರು ಸೇರಿಕೊಂಡು ಒಬ್ಬನಿಗೆ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾನೆ. ಈ ಘಟನೆಯಲ್ಲಿ 15 ವರ್ಷದ ಬಾಲಕನ ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ತಲೆ ಓಪನ್ ಆಗಿ ರಕ್ತಸ್ರಾವವಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ದಾರಿಯ ಮಧ್ಯೆಯೇ ಬಾಲಕ ಸಾವನ್ನಪ್ಪಿದ್ದಾನೆ ಎಂಬುದು ವೈದ್ಯರಿಂದ ಸ್ಪಷ್ಟವಾಗಿದೆ. ಅಲ್ಲಿ ಅವನು ಸಾವನ್ನಪ್ಪಿದ್ದಾನೆ ಎಂಬುದು ತಿಳಿದುಬಂದಿದೆ. ಈ ಘಟನೆ ಸಂಭವಿಸಿದ್ದು ಹೇಗೆ ಎಂದಾಗ, ಊಟದ ವಿರಾಮದ ವೇಳೆ ಕೆಲ ವಿದ್ಯಾರ್ಥಿಗಳು ಪೇಪರ್ ಬಾಲ್ ಹಿಡಿದು ಕ್ರಿಕೆಟ್ ಆಡುತ್ತಿದ್ದಾರೆ.
ಈ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಆಟದ ಸಮಯದಲ್ಲಿ ಸಣ್ಣದಾಗಿ ಜಗಳವಾಡಿದ್ದಾರೆ. ಅದರ ನಂತರ ಇತರ ಇಬ್ಬರು ಹುಡುಗರು ಏಕಾಏಕಿ ಆತನಿಗೆ ತಮ್ಮ ಮುಷ್ಠಿಯಿಂದ ತಲೆ ಮೇಲೆ ಹೊಡೆದಿದ್ದಾರೆ. ಬಿರುಸಿನಿಂದ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯ ವೈದ್ಯರು ಮರಣೋತ್ತರ ಪರೀಕ್ಷೆಯ ನಂತರ ಸ್ಪಷ್ಟವಾಗಿ ತಿಳಿಯಲಿದೆ ಎಂದು ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.