Visit Channel

ಕರ್ನಾಟಕದಲ್ಲಿ ಒಟ್ಟು 15,000 ಶಿಕ್ಷಕರ ಭರ್ತಿಗೆ ಸರ್ಕಾರ ನಿರ್ಧಾರ

ಬೆಂಗಳೂರು ಡಿ 11 : ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡಲು ಸರ್ಕಾರವು ನಿರ್ಧರಿಸಿದ್ದು ಪ್ರಸಕ್ತ ಸಾಲಿನಲ್ಲಿ 15000 ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರ ನೇಮಕಕ್ಕೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ ಹೆಚ್ಚುವರಿ 4,000 ಅತಿಥಿ ಉಪನ್ಯಾಸಕರಿಂದ ಸೇವೆ ಪಡೆದುಕೊಳ್ಳಲು ನಿರ್ಧರಿಸಲಾಗಿದೆ. 2022ರ ಸಾಲಿನ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ.ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 18,000 ಅತಿಥಿ ಶಿಕ್ಷಕರು ಮತ್ತು ಪ್ರೌಢ ಶಾಲೆಗಳಿಗೆ 5,078 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ನವೆಂಬರ್ 4ರಂದು ಆದೇಶ ಹೊರಡಿಸಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

2021-22ರ ಶೈಕ್ಷಣಿಕ ವರ್ಷದಲ್ಲಿ ಒಟ್ಟು 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಮ್ಮ ಟ್ವಿಟರ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಪ್ರಕಾರ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8 ) ಶಿಕ್ಷಕರ 10 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಕೆಲವೇ ದಿನಗಳಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಬಿ ಸಿ ನಾಗೇಶ್ ತಮ್ಮ ಟ್ವಿಟರ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.