ಕಳಪೆ ಆಹಾರ ವಿರೋಧಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರನೂಕಿದ ಅಧಿಕಾರಿ

Bellary : ಕರ್ನಾಟಕ ಜಿಲ್ಲೆ ಬಳ್ಳಾರಿಯಲ್ಲಿರುವ(Bellari) ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ, ಪ್ರತಿಭಟನೆ ನಡೆಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SCST students thrown out) ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕಲು ಇಲಾಖಾಧಿಕಾರಿಗಳು ಆದೇಶಿಸಿರುವ ಘಟನೆ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹಾಸ್ಟೆಲ್‌ನಲ್ಲಿ (Hostel)ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕಲು ಆದೇಶಿಸಲಾಗಿದೆ.

ಗುಣಮಟ್ಟದ ಆಹಾರ ನೀಡುವುದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ ಎಂದು ಜೆಡಿಎಸ್(JDS) ಶಾಸಕಾಂಗ ಪಕ್ಷದ ನಾಯಕ,

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ವಂದೇ ಭಾರತ್ ರೈಲಿನಲ್ಲಿ ರಾಶಿ ರಾಶಿ ಪ್ಲಾಸ್ಟಿಕ್‌ ಬಾಟಲಿಗಳು: ಕಾಣೆಯಾಯ್ತು ಸ್ವಚ್ಛ ಭಾರತ

ವಿದ್ಯಾರ್ಥಿಗಳ ಅಳಲಿಗೆ ಕಿವಿಗೊಡದೆ ಈ ಹೇಯ ಕೆಲಸಕ್ಕೆ ಆದೇಶ ನೀಡಿದ ಜಿಲ್ಲಾಧಿಕಾರಿ ಹಾಗೂ ವಿದ್ಯಾರ್ಥಿಗಳನ್ನು ಶಿಕ್ಷಿಸಿದ ಜಿಲ್ಲಾ ಇಲಾಖಾಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಬೇಕು.

ಈ ಬಗ್ಗೆ ಅಗತ್ಯ ತನಿಖೆ ನಡೆಸಬೇಕು. ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಈ ಸರ್ಕಾರದ ಆಡಳಿತದಲ್ಲಿ ಎಸ್‌ಸಿ, ಎಸ್‌ಟಿ(SC,ST) ವಿದ್ಯಾರ್ಥಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿ ಅಸಹ್ಯಕರವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಈ ಬಗ್ಗೆ ಧ್ವನಿ ಎತ್ತಿದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah), ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು(Sri Ramulu) ವಿದ್ಯಾರ್ಥಿಗಳ ಪರ ನಿಲ್ಲದೆ ಅವರ ವಿರುದ್ಧದ ಕ್ರಮಕ್ಕೆ ಬೆಂಬಲ ನೀಡಿರುವುದು ಎಷ್ಟು ಸರಿ?

ನಿಮ್ಮ ಮುಖವಾಡ ಕಳಚಿದೆ ಎಂದು ಸಚಿವ ಶ್ರೀರಾಮುಲು ಹಾಗೂ ಆಡಳಿತರೂಢ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಬೇಕಾದ (SCST students thrown out) ಆಡಳಿತವೇ ಈ ರೀತಿ ಅಪ್ರಜಾಸತ್ತಾತ್ಮಕವಾಗಿ ನಡೆದುಕೊಳ್ಳುತ್ತಿರುವುದು ಖಂಡನೀಯ!

ಇದನ್ನೂ ಓದಿ: U19 ವಿಶ್ವಕಪ್ ಗೆದ್ದ ಭಾರತ ಮಹಿಳಾ ಕ್ರಿಕೆಟ್‌ ತಂಡ: ಬಲಿಷ್ಠ ಇಂಗ್ಲೆಂಡ್‌ ತಂಡವನ್ನು ಮಣಿಸಿದ ಭಾರತೀಯ ವನಿತೆಯರು

ಈ ಸಮಸ್ಯೆ ಬಗೆಹರಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿ ಕೊಡಿ! ಇದಲ್ಲದೆ ಇಂತಹ ಕೆಟ್ಟ ನಿರ್ಧಾರ ಸರಿಯಲ್ಲ.

ಅಂಗೈ ಹುಣ್ಣಿಗೆ ಕನ್ನಡಿ ಏಕೆ ಎಂಬಂತೆ ನಿಮ್ಮ ಆಡಳಿತ ಎಷ್ಟು ಕುಸಿದಿದೆ ಎಂಬುದಕ್ಕೆ ಸಾಕ್ಷಿ ಬೇಕೇ? ಎಂದು ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಈ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ರಾಜ್ಯ ಬಿಜೆಪಿಯನ್ನು ಬೆಂಬಿಡದೆ ಪ್ರಶಿಸಿದೆ!


ಕಳಪೆ ಅಹಾರ ಪೂರೈಕೆಯ ದೂರುಗಳು ಹೆಚ್ಚಿನ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಲಯಗಳಲ್ಲಿ ಕೇಳಿ ಬರುತ್ತಿವೆ,

ಆದ್ರೆ ಅಧಿಕಾರಿಗಳ ದೌರ್ಜನ್ಯವನ್ನು ವಿದ್ಯಾರ್ಥಿಗಳು ಬಹಿರಂಗಪಡಿಸುತ್ತಿಲ್ಲ. ಬದಲಾಗಿ ನೋವನ್ನು ಸಹಿಸಿಕೊಂಡು ಶಿಕ್ಷಣ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.

ಅಧಿಕಾರಿಗಳ ವಿರುದ್ಧ ಮಾತನಾಡಿದ್ರೆ ಅವರು ವಿದ್ಯಾರ್ಥಿಗಳ ವಿರುದ್ಧವೇ ಕ್ರಮ ಕೈಗೊಳ್ಳುತ್ತಾರೆ ಅನ್ನೋ ಭಯ ಕಾಡುತ್ತಿದೆ. ಮೇಲಾಧಿಕಾರಿಗಳು ಕೂಡ ಅಧಿಕಾರಿಗಳನ್ನೇ ಬೆಂಬಲಿಸುತ್ತಿರುವುದು ಈ ವ್ಯವಸ್ಥೆಯ ದುರಂತವೇ ಸರಿ.

Exit mobile version