ಬಿಜೆಪಿ ಮುಖಂಡನ ಹತ್ಯೆ ಖಂಡಿಸಿ ಪ್ರತಿಭಟನೆ ; ಪುತ್ತೂರಿನಲ್ಲಿ ಸೆಕ್ಷನ್ 144 ಜಾರಿ

Praveen nettar

ಮಂಗಳವಾರ ಕರ್ನಾಟಕದ(Karnataka) ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಲ್ಲಿ ಬಿಜೆಪಿ(BJP) ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು(Praveen Nettar) ಅವರನ್ನು ಅಪರಿಚಿತರು ಹೆತ್ಯೆಗೈದ(Murder) ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ದಕ್ಷಿಣ ಕನ್ನಡ ಜಿಲ್ಲೆಯ, ಪುತ್ತೂರು(Puttur) ಭಾಗದಲ್ಲಿ ಸೆಕ್ಷನ್ 144(Section 144) ವಿಧಿಸಲಾಗಿದೆ ಮತ್ತು ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಮಂಗಳವಾರ ತಡರಾತ್ರಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬೈಕ್‌ನಲ್ಲಿ ಬಂದ ಅಪರಿಚಿತರು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ನಂತರ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಪೊಲೀಸರ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು(Mangaluru) ಮತ್ತು ಉಡುಪಿಯಿಂದಲೂ(Udupi) ಹೆಚ್ಚುವರಿ ಪೊಲೀಸ್ ಪಡೆಗಳನ್ನು ರವಾನಿಸಲಾಗಿದೆ.

ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಾನೂನು ಪ್ರಕಾರ ಶಿಕ್ಷಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಭರವಸೆ ನೀಡಿದ್ದಾರೆ. ಇದೇ ವೇಳೆ ಆರೋಪಿಗಳ ಪತ್ತೆಗೆ ಐದು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳ ಪತ್ತೆಗೆ ಐದು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಐದು ತಂಡಗಳ ಪೈಕಿ ಮೂರು ತಂಡಗಳನ್ನು ಕ್ರಮವಾಗಿ ಕೇರಳ(Kerala) ಮತ್ತು ಮಡಿಕೇರಿ(Madikeri) ಮತ್ತು ಹಾಸನ(Hassan) ಜಿಲ್ಲೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾಯ್ ಸುದ್ದಿಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಬಿಜೆಪಿ ಯುವ ಮುಖಂಡ ಪ್ರವೀಣ್ ಅವರ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಿ ಶಿಕ್ಷಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಟ್ವಿಟರ್‌ನಲ್ಲಿ(Tweeter) ಪ್ರತಿಕ್ರಿಯಿಸಿರುವ ಬೊಮ್ಮಾಯಿ ಅವರು, “ದಕ್ಷಿಣ ಕನ್ನಡದ ಸುಳ್ಯದ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಇಂತಹ ಹೇಯ ಕೃತ್ಯ ಎಸಗಿದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನಿನಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ್ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಟ್ವೀಟ್ ಮಾಡಿ ಹೇಳಿದ್ದಾರೆ.

ಇನ್ನೂ ಸಾಕ್ಷ್ಯಾಧಾರಗಳನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೇರಳ ಬೈಕ್ ನಂಬರ್ ಪ್ಲೇಟ್‌ನ ಮಾಹಿತಿಯನ್ನು ನಾವು ದೃಶ್ಯಗಳಲ್ಲಿ ಮಾತ್ರ ನೋಡಿದ್ದೇವೆ. ನಮಗೆ ಯಾವುದೇ ಸಾಕ್ಷಿಗಳು ಕಂಡುಬಂದಿಲ್ಲ. ಗಡಿಯಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದೇವೆ. ಎಲ್ಲಾ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಬೆಳ್ಳಾರೆ ಪ್ರದೇಶದಲ್ಲಿ ಮುಸ್ಲಿಂ ಯುವಕ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Exit mobile version