ಭದ್ರತಾ ಪಡೆಗಳ ಕಾರ್ಯಾಚರಣೆ: ಮೂವರು ಉಗ್ರರು ಹತ

ಶ್ರೀನಗರ, ಜು. 14: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನಿ ಪ್ರಜೆ ಸೇರಿದಂತೆ ಲಷ್ಕರ್ ಎ ತೊಯ್ಬಾ ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.

ಉಗ್ರರು ಇರುವ ಕುರಿತು ಖಚಿತ ಮಾಹಿತಿ ಆಧರಿಸಿ ಪುಲ್ವಾಮಾ ನಗರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದವು. ಉಗ್ರರ ಗುಂಡಿಗೆ ಭದ್ರತಾ ಪಡೆಗಳು ಪ್ರತಿ ಗುಂಡಿನ ದಾಳಿ ನಡೆಸುವ ಮೂಲಕ, ಕಾರ್ಯಾಚರಣೆ ಎನ್‌ಕೌಂಟರ್ ಆಗಿ ಮಾರ್ಪಟ್ಟಿತು. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Exit mobile version