Belagavi : ಮಹಾರಾಷ್ಟ್ರದ (security in Belgaum) ಸರ್ಕಾರದ ಇಬ್ಬರು ಸಚಿವರು ಇಂದು ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿಕೆ ನೀಡಿರುವ ಕಾರಣ,
ಮಹಾರಾಷ್ಟ್ರದ ಇಬ್ಬರು ಸಚಿವರು ಮತ್ತು ಒರ್ವ ಸಂಸದನಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಹೀಗಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.
ಈಗಾಗಲೇ ಈ ಕುರಿತು ಹೇಳಿಕೆ ನೀಡಿರುವ ಬೆಳಗಾವಿ (security in Belgaum) ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ (Nithesh Patil),
ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್ (Chandrakant Patil) , ಶಂಭುರಾಜ್ ದೇಸಾಯಿ (Shamburaj Desai) ಹಾಗೂ ಮಹಾರಾಷ್ಟ್ರದ ಗಡಿತಜ್ಞ ಸಮಿತಿ ಅಧ್ಯಕ್ಷ,
ಸಂಸದ ಧೈರ್ಯಶೀಲ್ ಮಾನೆಗೆ ಬೆಳಗಾವಿ ಗಡಿ ಪ್ರವೇಶಕ್ಕೆ ಸಿಆರ್‌ಪಿಸಿ(CRPC) 1973 ಕಲಂ 144(3) ರ ಅನ್ವಯ ಅಧಿಕಾರ ಬಳಸಿ ಆದೇಶ ಹೊರಡಿಸಿದ್ದೇನೆ. ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದೇವೆ.
ಇದನ್ನೂ ಓದಿ : https://vijayatimes.com/c-t-ravi-about-rahul-gandhi/
ಹೀಗಾಗಿ ಸಚಿವರು ಬಲ ಪ್ರಯೋಗದ ಮೂಲಕ ಬೆಳಗಾವಿ ಪ್ರವೇಶಿಸಲು ಪ್ರಯತ್ನಿಸಿದರೆ, ಅವರ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸದ್ಯ ಕರ್ನಾಟಕ ಮತ್ತು ಮಹಾರಾಷ್ಟ್ರವನ್ನು ಸಂಪರ್ಕಿಸುವ 22 ಚೆಕ್ ಪೋಸ್ಟ್‌ಗಳಲ್ಲಿ ಭಾರೀ ಭದ್ರತೆ ಏರ್ಪಡಿಸಲಾಗಿದೆ.
ಸುಮಾರು 1000ಕ್ಕೂ ಪೊಲೀಸರು ಬೆಳಗಾವಿ, ಕಾಗವಾಡ, ನಿಪ್ಪಾಣಿ, ಹುಕ್ಕೇರಿ, ಖಾನಾಪುರ ಮತ್ತು ಚಿಕ್ಕೋಡಿಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗುವ ಸಾಧ್ಯತೆ ಇದೆ.
ಹೀಗಾಗಿ ಸಾರ್ವಜನಿಕರ ನೆಮ್ಮದಿ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಂಇಎಸ್ (MES) ಮತ್ತು ಕರ್ನಾಟಕ ರಕ್ಷಣೆ ವೇದಿಕೆ ಕಾರ್ಯಕರ್ತರನ್ನು ಕೂಡಾ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಗಡಿ ಸಂಘರ್ಷ ತೀವ್ರಗೊಂಡಿರುವ ಹಿನ್ನಲೆ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿಭಾಗದ ಅನೇಕ ಗ್ರಾಮಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಗಡಿಭಾಗದ ಗ್ರಾಮಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಪೊಲೀಸರಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
- ಮಹೇಶ್.ಪಿ.ಎಚ್