Bengaluru: ಲೋಕಸಭೆ ಸಮರಕ್ಕೆ ಇನ್ನೇನು ಕೆಲವೇ ದಿನಗಳು (Selection of Congress Candidates) ಬಾಕಿಯಿದ್ದು, ಬಿಜೆಪಿ (BJP) ಅಭ್ಯರ್ಥಿಗಳ
ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಮುಂದಾಗಿದ್ದು, ಗೆಲ್ಲುವಂತಹ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು
ಮುಂದಾಗಿದೆ. ಇಂದು ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಸಿ ಪಟ್ಟಿ (Selection of Congress Candidates) ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ (Bengaluru) ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಅಭ್ಯರ್ಥಿಗಳ ಆಯ್ಕೆ
ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಮೊದಲ
ಪಟ್ಟಿ ಬಿಡುಗಡೆ ಬೆನ್ನಲ್ಲೇ ಅಲರ್ಟ್ ಆದ ಕಾಂಗ್ರೆಸ್ (Congress) ತನ್ನ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ಮುಂದಾಗಿದೆ.
ಯಾವುದೇ ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಶಾರ್ಟ್ಲಿಸ್ಟ್ (Short List) ಬಿಡುಗಡೆ ಮಾಡಲಿದ್ದಾರೆ. ಕಳೆದ ಬಾರಿ ನಡೆದ ಸಭೆಯಲ್ಲಿ ಸಮೀಕ್ಷಾ ವರದಿ
ಬಗ್ಗೆ ಚರ್ಚೆ ನಡೆದಿತ್ತು. ಈಗಾಗಲೇ ವೀಕ್ಷಕರು, ಜಿಲ್ಲಾ ಉಸ್ತುವಾರಿ ಸಚಿವರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಎಐಸಿಸಿ, ಕೆಪಿಸಿಸಿ, ಸಿಎಂ, ಡಿಸಿಎಂ
(AICC, KPCC, CM, DCM) ಮಾಡಿಸಿದ್ದ ಸಮೀಕ್ಷೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ನಂತರ ಕಾಂಗ್ರೆಸ್ ನಾಯಕರು ಪ್ರತಿ ಕ್ಷೇತ್ರಕ್ಕೆ ಇಬ್ಬರ ಹೆಸರು
ಶಿಫಾರಸು ಮಾಡಲಿದ್ದಾರೆ.
ರಾಜ್ಯದಲ್ಲಿ ಟಾರ್ಗೆಟ್ 20 ರೀಚ್ ಆಗಲು ಕಾಂಗ್ರೆಸ್ ನಾಯಕರ ಕಸರತ್ತು ನಡೆಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಎಐಸಿಸಿಗೆ ಅಭ್ಯರ್ಥಿಗಳ ಹೆಸರು
ಶಿಫಾರಸು ಮಾಡಲಿದ್ದಾರೆ. ಬೇಗ ಅಭ್ಯರ್ಥಿಗಳ ಆಯ್ಕೆಯಾದರೆ ಕ್ಷೇತ್ರದಲ್ಲಿ ಕೆಲಸ ಮಾಡಲು ಅನುಕೂಲ ಆಗುತ್ತೆ. ಸರ್ಕಾರದ ಗ್ಯಾರಂಟಿ ಯೋಜನೆ ಜೊತೆ
ವೈಯಕ್ತಿಕ ಸಾಧನೆ ತಿಳಿಸಲು ಅನುಕೂಲ ಆಗುತ್ತೆ. ಹೀಗಾಗಿ ಕಾಂಗ್ರೆಸ್ ನಾಯಕರು ಮಹತ್ವದ ಸಭೆಗೆ ಮುಂದಾಗಿದ್ದಾರೆ.
ಲೋಕಸಭೆ ಎಲೆಕ್ಷನ್ಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಸಂಬಂಧ ವಾರದೊಳಗೆ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಮತ್ತು ಕೋರ್ ಕಮಿಟಿ (Core-Committee) ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು
ಚರ್ಚೆ ನಡೆಸಿದೆ.
ರಾಜ್ಯ ಚುನಾವಣಾ ಸಮಿತಿಗೆ ಕಳೆದ ಎರಡು ದಿನಗಳಲ್ಲಿ 28ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದ ವೀಕ್ಷಕರು ವರದಿಯನ್ನು
ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಸಮಿತಿ ಮತ್ತು ಕೋರ್ ಕಮಿಟಿ ವೀಕ್ಷಕರಿಂದ ಸಲ್ಲಿಕೆಯಾದ ಹೆಸರುಗಳ ಬಗ್ಗೆ ಚರ್ಚೆ ನಡೆಸಿದೆ.
ಇದನ್ನು ಓದಿ: ಗುತ್ತಿಗೆದಾರರ ಸಮಾವೇಶದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ