ರೇಷನ್ ಕಾರ್ಡ್‌ದಾರರಿಗೆ ಮಹತ್ವದ ಸೂಚನೆ
ಸೆಪ್ಟೆಂಬರ್ 30ರೊಳಗೆ ರೇಷನ್ ಕಾರ್ಡ್ e-KYC ಕಡ್ಡಾಯ ಮಾಡಿಸದಿದ್ದರೆ ಅಕ್ಕಿ ಸೌಲಭ್ಯ ಸ್ಥಗಿತವಾಗುವ ಸಾಧ್ಯತೆ
ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯ(September 30 is the last day for e-KYC.)
ಕರ್ನಾಟಕದಲ್ಲಿ ರೇಷನ್ ಕಾರ್ಡ್ (Ration Card) ಹೊಂದಿರುವ ಕುಟುಂಬಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದ್ದು, ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರೂ ಸೆಪ್ಟೆಂಬರ್ 30, 2026ರೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. (September 30 is the last day for e-KYC.)
ಪಡಿತರ ಚೀಟಿಯಲ್ಲಿರುವ ಫಲಾನುಭವಿಗಳ ಗುರುತನ್ನು ದೃಢೀಕರಿಸುವ ಉದ್ದೇಶದಿಂದ ಈ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ.

ಪ್ರತಿಯೊಬ್ಬ ಸದಸ್ಯರೂ ತಮ್ಮ ಹೆಬ್ಬೆರಳ ಗುರುತು ನೀಡುವ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬೇಕಾಗಿದೆ.
ಈ ಹಿನ್ನೆಲೆಯಲ್ಲಿ ರೇಷನ್ ಕಾರ್ಡ್ ಹೊಂದಿರುವವರು ಕೊನೆಯ ದಿನದವರೆಗೆ ಕಾಯದೆ, ಮುಂಚಿತವಾಗಿಯೇ ತಮ್ಮ ಕುಟುಂಬದ ಎಲ್ಲ ಸದಸ್ಯರ ಇ-ಕೆವೈಸಿ ಪೂರ್ಣಗೊಂಡಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಅಗತ್ಯವಾಗಿದೆ. (September 30 is the last day for e-KYC)
ಸರ್ಕಾರದ ಪಡಿತರ ಸೌಲಭ್ಯ ಮುಂದುವರಿಯಲು ಈ ಪ್ರಕ್ರಿಯೆ ಪ್ರಮುಖವಾಗಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇ-ಕೆವೈಸಿ (e-KYC) ಪೂರ್ಣಗೊಂಡಿದೆಯೇ ಅಥವಾ ಬಾಕಿ ಉಳಿದಿದೆಯೇ ಎಂಬುದನ್ನು ಮನೆಯಲ್ಲಿಯೇ ಆನ್‌ಲೈನ್ ಮೂಲಕ ಪರಿಶೀಲಿಸಬಹುದು.
ಇದಕ್ಕಾಗಿ ಮೊಬೈಲ್‌ನಲ್ಲಿರುವ ಕ್ರೋಮ್ ಬ್ರೌಸರ್ (Chrome Browser) ತೆರೆಯಬೇಕು ಹಾಗೂ ಕರ್ನಾಟಕ ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
ಬಳಿಕ ಮುಖಪುಟದಲ್ಲಿ ಕಾಣಿಸುವ ಮೂರು ಗೆರೆಗಳ ಮೆನು ಆಯ್ಕೆಯನ್ನು ಕ್ಲಿಕ್ ಮಾಡಿ ‘ಇ-ಸೇವೆಗಳು’ (‘e-Services’) ವಿಭಾಗವನ್ನು ಆಯ್ಕೆ ಮಾಡಬೇಕು.
ನಂತರ ‘ಇ-ರೇಷನ್ ಕಾರ್ಡ್’ ಆಯ್ಕೆಗೆ ತೆರಳಿ ‘ಪಡಿತರ ಚೀಟಿ ವಿವರ’ ಅಥವಾ ‘Show RCs’ ಎಂಬ ಆಯ್ಕೆಯನ್ನು ಒತ್ತಬೇಕು.
ಮುಂದೆ ನಿಮ್ಮ ಜಿಲ್ಲೆಗೆ ಅನುಗುಣವಾಗಿ ಬೆಂಗಳೂರು ವಲಯ ಅಥವಾ ಇತರೆ ಜಿಲ್ಲೆಗಳ ವಲಯವನ್ನು ಆಯ್ಕೆ ಮಾಡಬೇಕು.
ನಂತರ ‘RC Status’ ಆಯ್ಕೆಯನ್ನು ಆರಿಸಿ, ನಿಮ್ಮ 12 ಅಂಕಿಯ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ‘Go’ ಬಟನ್ ಒತ್ತಿದರೆ ಕುಟುಂಬದ ಸದಸ್ಯರ ವಿವರಗಳು ಪರದೆಯ ಮೇಲೆ ಕಾಣಿಸುತ್ತವೆ.(September 30 is the last day for e-KYC)
ಕುಟುಂಬದ ಸದಸ್ಯರ ಪಟ್ಟಿಯಲ್ಲಿ ಪ್ರತಿಯೊಬ್ಬರ ಹೆಸರಿನ ಎದುರು ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಬಹುದು.
ಹೆಸರಿನ ಮುಂದೆ ‘Success’ ಎಂದು ಹಸಿರು ಬಣ್ಣದಲ್ಲಿ ಕಾಣಿಸಿದರೆ ಆ ಸದಸ್ಯರ ಇ-ಕೆವೈಸಿ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದರ್ಥ. ‘Pending’ ಎಂದು ಕಾಣಿಸಿದರೆ ಅಥವಾ ಯಾವುದೇ ಸ್ಥಿತಿ ತೋರಿಸದಿದ್ದರೆ,
ಆ ಸದಸ್ಯರ ಇ-ಕೆವೈಸಿ ಇನ್ನೂ ಪೂರ್ಣಗೊಂಡಿಲ್ಲ ಎಂದು ಅರ್ಥಮಾಡಿಕೊಳ್ಳಬೇಕು. ಇ-ಕೆವೈಸಿ ಮಾಡಿಸಲು ರೇಷನ್ ಕಾರ್ಡ್ ಸಂಖ್ಯೆ ಹಾಗೂ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್‌ಗಳು ಅಗತ್ಯವಾಗುತ್ತವೆ.
ಆದ್ದರಿಂದ ಪ್ರಕ್ರಿಯೆ ಕೈಗೊಳ್ಳುವ ಮುನ್ನ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಉತ್ತಮ. ಕುಟುಂಬದಲ್ಲಿ ಯಾರೊಬ್ಬರ ಇ-ಕೆವೈಸಿ ಬಾಕಿ ಇದ್ದರೂ, ಗಡುವಿನೊಳಗೆ ಅದನ್ನು ಪೂರ್ಣಗೊಳಿಸುವುದು ಮುಖ್ಯವಾಗಿದೆ.
ಇ-ಕೆವೈಸಿ ಪ್ರಕ್ರಿಯೆಯಲ್ಲಿ ಹೆಬ್ಬೆರಳ ಗುರುತು ಅಥವಾ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯವಾಗಿರುವುದರಿಂದ ಇದನ್ನು ನೇರವಾಗಿ ನ್ಯಾಯಬೆಲೆ ಅಂಗಡಿಗೆ ತೆರಳಿ ಮಾಡಿಸಬೇಕಾಗುತ್ತದೆ.
ಪಡಿತರ ಚೀಟಿಯಲ್ಲಿ ಹೆಸರಿರುವ ಸದಸ್ಯರು ತಮ್ಮ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಸಂಖ್ಯೆಯೊಂದಿಗೆ ನಿಯಮಿತವಾಗಿ ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಬಹುದು.
ಅಲ್ಲಿ ಇರುವ ಇ-ಪೋಸ್ ಯಂತ್ರದ ಮೂಲಕ ಹೆಬ್ಬೆರಳ ಗುರುತು ನೀಡಿ ಇ-ಕೆವೈಸಿ ಪ್ರಕ್ರಿಯೆಯನ್ನು ಉಚಿತವಾಗಿ ಪೂರ್ಣಗೊಳಿಸಬಹುದು.
ಒಂದು ವೇಳೆ ನ್ಯಾಯಬೆಲೆ ಅಂಗಡಿಯಲ್ಲಿ ತಾಂತ್ರಿಕ ಸಮಸ್ಯೆ ಎದುರಾದರೆ, ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಈ ಪ್ರಕ್ರಿಯೆಯನ್ನು ಮಾಡಿಸಿಕೊಳ್ಳುವ ಅವಕಾಶವಿದೆ.
ಹೀಗಾಗಿ ತಾಂತ್ರಿಕ ಕಾರಣಗಳಿಂದ ಪ್ರಕ್ರಿಯೆ ಬಾಕಿಯಾಗಿದ್ದರೆ ಪರ್ಯಾಯ ಕೇಂದ್ರಗಳನ್ನು ಬಳಸಿಕೊಳ್ಳಬಹುದು.
ಸೆಪ್ಟೆಂಬರ್ 30, 2026ರ ಗಡುವಿನೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಸಂಬಂಧಪಟ್ಟ ಸದಸ್ಯರ ಹೆಸರುಗಳನ್ನು ಪಡಿತರ ಚೀಟಿಯಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸುವ ಅಥವಾ ರದ್ದುಪಡಿಸುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದರ ಪರಿಣಾಮವಾಗಿ ಮುಂದಿನ ತಿಂಗಳುಗಳಲ್ಲಿ ಉಚಿತ ಅಕ್ಕಿ ಸೇರಿದಂತೆ ಪಡಿತರ ಸೌಲಭ್ಯಗಳು ಹಾಗೂ ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಇತರೆ ಸೌಲಭ್ಯಗಳ ಹಣ ಸ್ಥಗಿತಗೊಳ್ಳುವ ಸಾಧ್ಯತೆಯೂ ಇದೆ.
ಇದೇ ಕಾರಣಕ್ಕೆ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳು ತಮ್ಮ ಸದಸ್ಯರ ಇ-ಕೆವೈಸಿ ಸ್ಥಿತಿಯನ್ನು ಕೂಡಲೇ ಪರಿಶೀಲಿಸಿಕೊಳ್ಳಬೇಕು.(September 30 is the last day for e-KYC.)
ಬಾಕಿ ಇರುವ ಸದಸ್ಯರು ಅಗತ್ಯ ದಾಖಲೆಗಳೊಂದಿಗೆ ನ್ಯಾಯಬೆಲೆ ಅಂಗಡಿ ಅಥವಾ ಸಂಬಂಧಪಟ್ಟ ಸೇವಾ ಕೇಂದ್ರಕ್ಕೆ ತೆರಳಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಸೂಕ್ತ.
ಕೊನೆಯ ದಿನದವರೆಗೆ ಕಾಯದೆ ಮುಂಚಿತವಾಗಿ ಇ-ಕೆವೈಸಿ ಮಾಡಿಸಿಕೊಂಡರೆ ತಾಂತ್ರಿಕ ಸಮಸ್ಯೆ ಅಥವಾ ಹೆಚ್ಚಿನ ಜನಸಂದಣಿಯಿಂದ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸಿಕೊಳ್ಳಬಹುದು.
ಇದನ್ನು ಓದಿ:https://vijayatimes.com/regulating-parking-is-essential-to-control-traffic-krishna-byregowda/