ಸದನ ಆರಂಭವಾದ್ರೂ ಆಯ್ಕೆಯಾಗದ ವಿಪಕ್ಷ ನಾಯಕ: ವಿರೋಧ ಪಕ್ಷದ ನಾಯಕನಿಲ್ಲದೇ ಅಧಿವೇಶನ

Karnataka : ಕಾಂಗ್ರೆಸ್‌ (Congress) ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಈಗಾಗಲೇ 50 ದಿನಗಳು ಪೂರೈಸಿದ್ದು,ಇಂದಿನಿಂದ (Session without Opposition Leader) ಜುಲೈ 3 ರಿಂದ ಮೊದಲ

ಅಧಿವೇಶನವೂ ಕೂಡ ಆರಂಭವಾಗಿದೆ ಆದರೂ, ವಿಪಕ್ಷ ನಾಯಕ ಆಯ್ಕೆಯನ್ನು ವಿರೋಧ ಪಕ್ಷವಾಗಿರುವ ಬಿಜೆಪಿಯಿಂದ (BJP) ಅಂತಿಮಗೊಳಿಸಿಲ್ಲ. ಹೀಗಾಗಿ ಅಧಿವೇಶನ ವಿಪಕ್ಷ ನಾಯಕನಿಲ್ಲದೇ ನಡೆಯುತ್ತಿದೆ.

ಕರ್ನಾಟಕ ರಾಜ್ಯದ ವಿಪಕ್ಷ ನಾಯಕರನ್ನು ಆಯ್ಕೆ ಮಾಡುವ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ (B.S Yediyurappa) ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಜೆ.ಪಿ. ನಡ್ಡಾ(J.P Nadda) ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಈ ಕುರಿತು ನವದೆಹಲಿಯಲ್ಲಿ (New Delhi) ಭೇಟಿ ಮಾಡಿ ಚರ್ಚೆ ಮಾಡಿ ವಿಪಕ್ಷ

ನಾಯಕರ ಆಯ್ಕೆ ಆಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಆದ್ದರಿಂದ ವಿನೋದ್ ತಾವಡೆ ಮತ್ತು ಮನ್ಸೂಕ್ ಮಂಡವಿಯಾ ಇಬ್ಬರು ಇಂದು ಕೇಂದ್ರದಿಂದ ವೀಕ್ಷಕರು ರಾಜ್ಯಕ್ಕೆ ಆಗಮಿಸಲಿದ್ದಾರೆ.

ರಾಜ್ಯ ಬಿಜೆಪಿ ಶಾಸಕರಿಂದ ಅವರೇ ಸ್ವತಃ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ

Session without Opposition Leader

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅಭಿಪ್ರಾಯ ಸಂಗ್ರಹ:

ಇನ್ನು ವೀಕ್ಷಕರಿಂದ ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ (BJP State President) ಹುದ್ದೆ ಬಗ್ಗೆಯೂ ಮಾಹಿತಿ ಸಂಗ್ರಹ ಆಗಲಿದೆ. ನಂತರ ಕೇಂದ್ರ ನಾಯಕರಿಗೆ ವೀಕ್ಷಕರು ವರದಿ ನೀಡಲಿದ್ದಾರೆ.

ಇದನ್ನು ಓದಿ: ಭಾನುವಾರ, ಸೋಮವಾರ ಪ್ರವಾಸಿಗರಿಗೆ ನಂದಿಬೆಟ್ಟ ಮತ್ತು ಸ್ಕಂದಗಿರಿಗೆ 2 ದಿನ ಪ್ರವೇಶ ಇಲ್ಲ

ನಂತರ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ಮಾಡಲಾಗುತ್ತದೆ. ಈ ಮೂಲಕ ಇಂದಿನ ಅಧಿವೇಶನಕ್ಕೆ ವಿಪಕ್ಷ ನಾಯಕ ಸ್ಥಾನದಲ್ಲಿ ಯಾರೂ ಇರುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಸ್ಪಷ್ಟ ಮಾಹಿತಿ ನೀಡಿದರು.

ಮತ್ತೆ ಎರಡು ದಿನದಲ್ಲಿ ದೆಹಲಿಗೆ ಆಗಮನ:

ಕರ್ನಾಟಕದ (Karnataka) ರಾಜಕೀಯ ಪರಿಸ್ಥಿತಿಯನ್ನುಗೃಹ ಸಚಿವ ಅಮಿತ್ ಶಾ, ನಮ್ಮ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಕೇಳಿ ವರದಿ ಪಡೆದುಕೊಂಡಿದ್ದಾರೆ.

ಮುಂದೆ ಏನು ಮಾಡಬೇಕೆಂದು ಎಲ್ಲಾ ವಾತಾವರಣ ತಿಳಿದುಕೊಂಡು ನಂತರ (Session without Opposition Leader) ತೀರ್ಮಾನ ಮಾಡುತ್ತಾರೆ.

ಇಬ್ಬರು ವೀಕ್ಷಕರನ್ನ ವಿಪಕ್ಷ ನಾಯಕ ಆಯ್ಕೆ ವಿಚಾರವಾಗಿ ಕಳುಹಿಸಿ ಕೊಡ್ತೀವಿ ಅಂತ ಹೇಳಿದ್ದಾರೆ. ಮನ್ಸೂಕ್ ಮಾಂಡವೀಯ (Mansook Mandaveeya) ಮತ್ತು ವಿನೋದ್ ತಾವಡೆ(Vinod Tavade)  ಅವರನ್ನು ವೀಕ್ಷಕರಾಗಿ ಕಳುಹಿಸಿಕೊಡ್ತಿದ್ದಾರೆ. ಅವರೆಲ್ಲ ಹೈ ಕಮಾಂಡ್‌ಗೆ ಶಾಸಕರ ಅಭಿಪ್ರಾಯ ಪಡೆದು ಇಲ್ಲಿ ಬಂದು  ತಿಳಿಸುತ್ತಾರೆ ಎಂದು ಮಾಹಿತಿ ನೀಡಿದರು. 

ನಿನ್ನೆ ಸಂಜೆ ಸಭೆಯನ್ನು ಎರಡು ಬಾರಿ ಮುಂದೂಡಿಕೆ:

ಇನ್ನು ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ ನಾಯಕರಾದ ಗೃಹ ಸಚಿವ ಅಮಿತ್ ಶಾ, ಮತ್ತು ರಾಷ್ಟ್ರೀಯ ಅಧ್ಯಕ್ಷ ನಡ್ಡಾ ದೆಹಲಿಗೆ ಕರೆಸಿಕೊಂಡಿದ್ದರು.ಮೊದಲು ಸಂಜೆ 4 ಗಂಟೆ

ನಂತರ ಭೇಟಿಯಾಗಿ ಚರ್ಚೆ ಮಾಡುವುದಾಗಿ ತಿಳಿಸಿದ್ದರು.ರಾತ್ರಿ 8 ಗಂಟೆಗೆ ನಂತರ ಭೇಟಿಗೆ ಸಮಯ ನೀಡಲಾಗುತ್ತು. ಆದರೆ ಯಡಿಯೂರಪ್ಪ ಅವರಿಗೆ 9 ಗಂಟೆಯ ನಂತರ ಮಹಾರಾಷ್ಟ್ರ

(Maharashtra) ಸರ್ಕಾರದ ಬೆಳಗವಣಿಗೆ ಕುರಿತು ತುರ್ತು ಚರ್ಚೆ ಆರಂಭಿಸಿದ ಹಿನ್ನೆಲೆಯಲ್ಲಿ ಭೇಟಿಗೆ ಅವಕಾಶ ನೀಡಲಾಗಿತ್ತು. ಇನ್ನು ನಿನ್ನೆ ಯಡಿಯೂರಪ್ಪ ಅವರು ತಡವಾಗಿ ಹೈಕಮಾಂಡ್‌

ಭೇಟಿಯಾದ ಅವರು ವಿಪಕ್ಷ ನಾಯಕರ ಆಯ್ಕೆ ನಾಳೆಯೂ ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ರಶ್ಮಿತಾ ಅನೀಶ್

Exit mobile version