ಕೋಲ್ಕತ್ತ, ಜು. 03: ತಮ್ಮ ಮೈ ಬಣ್ಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಅವಹೇಳನಕಾರಿಯಾಗಿ ಟ್ರೋಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಂಗಾಳಿ ನಟಿ ಶೃತಿ ದಾಸ್ ಅವರು ಕೋಲ್ಕತ್ತ ಸೈಬರ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಕಳೆದ ಎರಡು ವರ್ಷದಿಂದ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಮೈ ಬಣ್ಣದ ಬಗ್ಗೆ ಟ್ರೋಲ್ ಮಾಡುತ್ತಿದ್ದಾರೆ. ಆರಂಭದಲ್ಲಿ ಇದನ್ನು ಉಪೇಕ್ಷಿಸಿದ್ದರೂ, ಇತ್ತೀಚಿನ ದಿನಗಳಲ್ಲಿ ಇದು ಜಾಸ್ತಿ ಆಗಿದೆ. ಇದು ಸಹಿಸಿಕೊಳ್ಳಲು ಅಸಾಧ್ಯ. ಸೈಬರ್ ಪೊಲೀಸರು ಟ್ರೋಲ್ ಮಾಡಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಹಿಳೆಯರ ಬಗ್ಗೆ ನಿಂದಾನಾತ್ಮಕವಾಗಿ ಟ್ರೋಲ್ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮಹಿಳಾ ಆಯೋಗ ಶೃತಿ ದಾಸ್ ದೂರಿಗೆ ಪ್ರತಿಕ್ರಿಯೆ ನೀಡಿದೆ.