• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಾಲಾ-ಕಾಲೇಜುಗಳಲ್ಲಿ ಕೊರೊನಾ‌ ಹರಡುತ್ತಿದೆ ಎಂಬ ಸುದ್ದಿ ಪ್ರಕಟ: ಸುರೇಶ್ ಕುಮಾರ್ ಬೇಸರ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಶಾಲಾ-ಕಾಲೇಜುಗಳಲ್ಲಿ ಕೊರೊನಾ‌ ಹರಡುತ್ತಿದೆ ಎಂಬ ಸುದ್ದಿ ಪ್ರಕಟ: ಸುರೇಶ್ ಕುಮಾರ್ ಬೇಸರ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 04: ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭಗೊಂಡಿದ್ದು, ಎಲ್ಲೆಡೆ ಒಳ್ಳೆಯ ಬೆಂಬಲ ದೊರೆಯುತ್ತಿದೆ. ಹೀಗಿದ್ದರೂ ಶಾಲೆಗಳಲ್ಲಿ ಕೊರೊನಾ ಹರಡುತ್ತಿದೆ ಎಂಬ ಸುದ್ದಿಗಳನ್ನು ಬಿತ್ತರಿಸಲಾಗುತ್ತಿದೆ ಎಂದು ಸಚಿವ ಸುರೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಅನಿಸಿಕೆ ವ್ಯಕ್ತಪಡಿಸಿರುವ ಅವರು, ‘ಕಳೆದ ನಾಲ್ಕು ದಿನಗಳಿಂದ ನಾನು ಶಾಲಾ ಕಾಲೇಜುಗಳಿಗೆ ಭೇಟಿ ನೀಡುತ್ತಿದ್ದೇನೆ. ನಿನ್ನೆ ಮತ್ತು ಇಂದು ಆನೇಕಲ್ಲು ಮತ್ತು ರಾಮನಗರ, ಮಾಗಡಿ ತಾಲೂಕುಗಳ ಶಾಲಾ-ಕಾಲೇಜುಗಳಲ್ಲಿ ಅಪಾರ ಸಂಖ್ಯೆಯ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಮಾತನಾಡಿಸಿದ್ದೇನೆ. ಎಲ್ಲ ಕಡೆ ಶಾಲೆ-ಕಾಲೇಜುಗಳು ಪ್ರಾರಂಭವಾಗಿರುವ ಬಗ್ಗೆ ಒಳ್ಳೆಯ ಬೆಂಬಲ ಹಾಗೂ ಸಂತಸ ಕಂಡುಬರುತ್ತಿದೆ. ಮಕ್ಕಳ ಖುಷಿ, ಸಂಭ್ರಮ..ನೋಡಿಯೇ ಅನುಭವಿಸಬೇಕು.

ಆದರೆ ಆಗಲೇ ಜೊತೆಜೊತೆಗೆ ಮತ್ತೆ ಆತಂಕ ಉಂಟುಮಾಡುವ ಸುದ್ದಿಗಳೂ ಪ್ರಕಟವಾಗುತ್ತಿವೆ. ನಿನ್ನೆಯಿಂದ ತಾನೇ ನಮ್ಮ ಎಸ್.ಎಸ್.ಎಲ್.ಸಿ ಮತ್ತು ಎರಡನೇ ಪಿಯುಸಿ ತರಗತಿಗಳು ಹಾಗೂ ವಿದ್ಯಾಗಮ ಕಾರ್ಯಕ್ರಮಗಳು ಪ್ರಾರಂಭವಾಗಿರುವುದು.

ಆಗಲೇ ಇಂದು ಶಾಲೆಗಳಲ್ಲಿ ಕೊರೊನಾ ಹರಡುತ್ತಿದೆ ಎಂದು ಅರ್ಥ ಬರುವಂತಹ ಸುದ್ದಿಗಳನ್ನು ಗಮನಿಸಿದೆ. ಇದು ವಿದ್ಯಾಗಮವಲ್ಲ, ಬದಲಿಗೆ ಇದು “ಕೊರೋನಾಗಮ” ಎಂಬ ವರ್ಣರಂಜಿತ ನಾಮಕರಣ ಕೇಳಿ ಮನಸ್ಸಿಗೆ ವೇದನೆಯಾಯಿತು.

ಎಲ್ಲರಲ್ಲೂ, ಶಿಕ್ಷಣಕ್ಕೆ ಮತ್ತು ಮಕ್ಕಳಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿಯನ್ನು ದಯವಿಟ್ಟು Sensationalize ಮಾಡಬಾರದೆಂದು ನಾನು ಕಳಕಳಿಯಿಂದ ವಿನಂತಿ ಮಾಡುತ್ತಿದ್ದೇನೆ.

ಮಕ್ಕಳ ಬಗ್ಗೆ ತುಸು ಉದಾರತೆ ಮತ್ತು ಕಾಳಜಿ…ಅಗತ್ಯ ಎಂದು ನಮಗೆಲ್ಲಾ ತಿಳಿದೇ ಇದೆ. ಇಂದು ಅವರ ಮನಸ್ಥಿತಿಯನ್ನು ನಾವು ಅರ್ಥ ಮಾಡಿಕೊಳ್ಳಬೇಕು. ನಾವು ಯಾವುದೇ ವೃತ್ತಿಯಲ್ಲಿದ್ದರೂ ನಾವು ಈ ಸಮಾಜದ ಭಾಗ ಎಂಬುದೂ ಮುಖ್ಯ. ಎಲ್ಲ ಕಡೆ ಮಕ್ಕಳು ತರಗತಿಗೆ ಬಂದು ಶಿಕ್ಷಕರಿಂದ ಪಾಠ ಕೇಳಬೇಕೆಂಬ ತುಡಿತ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಹೆಣ್ಣು ಮಕ್ಕಳು “ಯಾವುದೇ ಕಾರಣಕ್ಕೂ ತರಗತಿ ಗಳನ್ನು ನಿಲ್ಲಿಸಬೇಡಿ” ಎಂದೂ ಸಹ ಮನವಿ ಮಾಡಿರುವ ಸಂಗತಿಗಳೂ ನಡೆದಿವೆ.

ವಿಶೇಷವಾಗಿ ಗ್ರಾಮೀಣ ಭಾಗದ ಶಾಲೆಗಳಲ್ಲಿ ಇದು ಅತ್ಯಂತ ಅಗತ್ಯವಾಗಿರುವುದು ಕಂಡುಬರುತ್ತಿದೆ. ನಾವೆಲ್ಲರೂ ಈ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಕಾಳಜಿ ಇಡೋಣ. ಇವರಿಗೆ ಶಿಕ್ಷಣ ದೊರಕದಿದ್ದರೆ ಇವರ ಬಾಳು ಎತ್ತ ಸಾಗುತ್ತದೋ ನಮಗೆ ತಿಳಿಯದು. ಗ್ರಾಮೀಣ ಭಾಗದಲ್ಲಿ ಬಾಲಕಾರ್ಮಿಕ, ಬಾಲ್ಯ ವಿವಾಹ….ಪ್ರಸಂಗಗಳು ಹೆಚ್ಚಾಗುವುದು ಸಮಾಜಕ್ಕೆ ಒಳಿತಲ್ಲ. ನನ್ನ ಈ ಪ್ರಾಮಾಣಿಕ ಅನಿಸಿಕೆ, ಮನವಿಯನ್ನು ದಯವಿಟ್ಟು ಯಾರೂ ತಪ್ಪಾಗಿ ತಿಳಿಯಬೇಡಿ” ಎಂದು ಮನವಿ ಮಾಡಿದ್ದಾರೆ.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.