ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಜವಾಬ್ದಾರಿ ನಮ್ಮದು: ಸುರೇಶ್ ಕುಮಾರ್

ಬೆಂಗಳೂರು, ಜ. 01: ಶಾಲೆಯಲ್ಲಿ ಮಕ್ಕಳ ಸುರಕ್ಷತೆಯ ಜವಾಬ್ದಾರಿ ನಮ್ಮದು, ಎಲ್ಲ ಪೋಷಕರು ಮಕ್ಕಳನ್ನು ಆಶೀರ್ವದಿಸಿ ಧೈರ್ಯವಾಗಿ ಶಾಲೆಗೆ ಕಳಿಸಿ, ಅವರ ಶೈಕ್ಷಣಿಕ ಭವಿಷ್ಯ ಉಜ್ವಲವಾಗಲಿ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಪೋಷಕರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಜನವರಿ 1ರಿಂದ ಪ್ರಸ್ತುತ ಶೈಕ್ಷಣಿಕ ವರ್ಷದ 10 ಮತ್ತು 12ನೇ ತರಗತಿಗಳು ಸುರಕ್ಷಿತ ವಾತಾವರಣದಲ್ಲಿ ಆರಂಭವಾಗುತ್ತಿದ್ದು, ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು ನಮ್ಮ ಮಕ್ಕಳಂತೆಯೇ ನೋಡಿಕೊಳ್ಳುತ್ತೇವೆ. ಶಾಲಾ ವಿದ್ಯಾಲಯ ಸುರಕ್ಷಿತಾಲಯವಾಗಿರಲಿದೆ ಎಂದು ಭರವಸೆ ನೀಡಿದ್ದಾರೆ.
ಶಾಲೆಗಳು ಮುಚ್ಚಿಕೊಂಡಿದ್ದು ಮೈದಾನಗಳು ಕಾಲಿ ಕಾಲಿಯಾಗಿವೆ, ಅದೆಲ್ಲಕ್ಕೂ ಅಂತ್ಯ ಎನ್ನುವಂತೆ ಶಾಲೆಗಳು ಆರಂಭವಾಗುತ್ತಿರುವುದು ಮಕ್ಕಳು ಮತ್ತು ಪೋಷಕರಲ್ಲಿ ಒಂದು ಹೊಸ ಉತ್ಸಾಹಕ್ಕೆ ಕಾರಣವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ತಮ್ಮ ಒಪ್ಪಿಗೆ ಪತ್ರ ನೀಡಿ ಕಳಿಸಬೇಕು ಎಂದರು.

ಇನ್ನು ಮಕ್ಕಳಿಗೆ ಶೀತ, ಜ್ವರ, ನೆಗಡಿಯಂತ ಲಕ್ಷಣಗಳಿದ್ದರೆ ಕಳುಹಿಸುವುದು ಬೇಡ. ನಮಗೆ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಿಂತ ಅವರ ಆರೋಗ್ಯವೂ ಸಹ ಮುಖ್ಯವಾಗಿದೆ. ಶಾಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಜೊತೆಗೆ ಶಾಲೆಗಳನ್ನು ಸ್ಯಾನಿಟೈಜೇಶನ್ ಮಾಡಲಾಗಿದ್ದು, ಪ್ರತಿ ದಿನ ಮಕ್ಕಳ ಆರೋಗ್ಯದ ಕಡೆ ಓರ್ವ ಶಿಕ್ಷಕರು ಕಣ್ಗಾವಲು ಇಟ್ಟಿರುತ್ತಾರೆ ಎಂದರು.

Exit mobile version