Visit Channel

ಕೊನೆಯ ಹಂತದ ಚಿತ್ರೀಕರಣದಲ್ಲಿ ‘ಶಂಭೋ ಶಿವಶಂಕರ’

WhatsApp Image 2021-08-02 at 15.14.32

ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ ‘ಶಂಭೋ ಶಿವ ಶಂಕರ’ ಚಿತ್ರದ ನಾಯಕರಲೊಬ್ಬರಾದ ಅಭಯ್ ಪುನೀತ್ ಅವರ ಹುಟ್ಟುಹಬ್ಬ ಇತ್ತೀಚೆಗೆ ನೆರವೇರಿದೆ.

ಅಭಯ್ ಪುನೀತ್ ಹುಟ್ಟುಹಬ್ಬದ ಸವಿನೆನಪಿಗಾಗಿ ಚಿತ್ರತಂಡ ಆನಂದ್ ಆಡಿಯೋ ಮೂಲಕ ಟೀಸರ್ ಬಿಡುಗಡೆಮಾಡಿದೆ. ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಸ್ಯಾಂಡಲ್ ವುಡ್ ಗಣ್ಯರು ಈ ಟೀಸರ್ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಕೊನೆಯ ಹಂತದ ಚಿತ್ರೀಕರಣ ಆಗಸ್ಟ್ 3 ರಿಂದ ಆರಂಭವಾಗಲಿದೆ.

ಶಂಕರ್ ಕೋನಮಾನಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಗೌಸ್ ಫೀರ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೆ ಸಂಗೀತ ನೀಡುತ್ತಿದ್ದಾರೆ‌. ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

‘ಶಂಭೋ ಶಿವ ಶಂಕರ’ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ. ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮಾಂಟೆರೊ, ಜೊಗಿ‌ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್’, ಡಿ.ಸಿ.ತಮ್ಮಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Latest News

Aadhar Card
ಡಿಜಿಟಲ್ ಜ್ಞಾನ

ಕೇಂದ್ರದಿಂದ ರಾಜ್ಯಗಳಿಗೆ ಮಹತ್ವದ ಸುತ್ತೋಲೆ ; ಸರ್ಕಾರಿ ಸವಲತ್ತುಗಳು ಹಾಗೂ ಸಬ್ಸಿಡಿಯನ್ನು ಪಡೆಯಲು ಆಧಾರ್ ಕಡ್ಡಾಯ!

UIDAI ಒಂದು ಮಹತ್ವದ ಸುತ್ತೋಲೆಯನ್ನು ಹೊರಡಿಸಿದ್ದು, ಇತ್ತೀಚಿನ ಸುತ್ತೋಲೆಯಂತೆ ಇನ್ನು ಮುಂದೆ ಸರ್ಕಾರಿ ಸಬ್ಸಿಡಿಗಳು(Subsidy) ಮತ್ತು ಪ್ರಯೋಜನಗಳನ್ನು ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯವಾಗಿದೆ!

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.