ಒಂದೇ ವರ್ಷದಲ್ಲಿ 15 ಸಿನಿಮಾಗಳನ್ನು ಬಿಡುಗಡೆ ಮಾಡಿದ ದಾಖಲೆ ನಟ ಶಂಕರ್ ನಾಗ್ ಅವರಿಗೆ ಸಲ್ಲುತ್ತದೆ!

ನವೆಂಬರ್ 9, 1954 ರಂದು ಕರ್ನಾಟಕದ ಹೊನ್ನಾವರ(Honnavara) ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್(Shankar Nag) ಅವರು ಜನಿಸಿದರು.

Shankar nag

ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತಮ್ಮ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು.


ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್, ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತಮ್ಮನ್ನು ತೊಡಗಿಸಿಕೊಂಡರು.


ಅಣ್ಣ ಅನಂತ ನಾಗ್ ಅವರಂತೆ ಇವರೂ ಬ್ಯಾಂಕ್ ನೌಕರನಾದರೂ ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಂಗೀತ ಅಭಿರುಚಿ ಇದ್ದ ಕಾರಣ ತಬಲ , ಕೊಳಲು , ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸಲು ಕಲಿತರು. ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡರ(Girish Karnad) “ಒಂದಾನೊಂದು ಕಾಲದಲ್ಲಿ” ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, ಒಂದಾನೊಂದು ಕಾಲದಲ್ಲಿ ಚಿತ್ರದ ಅಭಿನಯಕ್ಕೆ ಅಂತರರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು.

ನಂತರದ 12 ವರ್ಷಗಳಲ್ಲಿ ಕನ್ನಡದ ಸುಮಾರು 60ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದರು. ಶಂಕರ್ ನಾಗ್ ಪ್ರಥಮ ಬಾರಿಗೆ ತ್ರಿಪಾತ್ರದಲ್ಲಿ ಅಭಿನಯಿಸಿದ ಚಿತ್ರ “ಗೆದ್ದ ಮಗ”. ತಮ್ಮ ಸಹೋದರ ಅನಂತ ನಾಗ್ ಅವರೊಡನೆ “ಮಿಂಚಿನ ಓಟ”, “ಜನ್ಮ ಜನ್ಮದ ಅನುಬಂಧ” ಮತ್ತು “ಗೀತಾ” ಚಿತ್ರಗಳನ್ನು ನಿರ್ಮಿಸಿದರು. ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಆರ್.ಕೆ. ನಾರಾಯಣ್(RK Narayan) ಅವರ ಮಾಲ್ಗುಡಿ ಡೇಸ್(Malgudi Days) ಅಥವಾ ಮಾಲ್ಗುಡಿಯ ದಿನಗಳು” ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿದ್ದಾರೆ.

ಇಂದೂ ಸಹ ಇದುವರೆಗೆ ಎಲ್ಲ ತರಹದ ದೂರದರ್ಶನ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ಜನ ಪ್ರಿಯತೆಗಳಿಸಿ ಪಂಡಿತರು, ಬುದ್ಧಿ ಜೀವಿಗಳಿಂದಲೂ ಮೆಚ್ಚುಗೆ ಗಳಿಸಿದ ಮಹೋನ್ನತ ಧಾರವಾಹಿ ‘ಮಾಲ್ಗುಡಿ ಡೇಸ್’. ಕೇವಲ ಒಂದೇ ವರ್ಷದಲ್ಲಿ 15 ಚಿತ್ರಗಳನ್ನು ಬಿಡುಗಡೆ ಮಾಡಿದ ಕೀರ್ತಿ ಕೂಡ ಶಂಕರ್ ನಾಗ್ ಅವರದ್ದು.
ನಂದಿ ಬೆಟ್ಟಕ್ಕೆ ರೋಪ್ ವೇ, ಬೆಂಗಳೂರಿಗೆ ಮೆಟ್ರೋ ರೈಲು, ರಂಗಮಂದಿರ ಇವೆಲ್ಲಕ್ಕೂ ನಕ್ಷೆ ತಯಾರಿಸಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಸರ್ಕಾರದ ಮುಂದೆ ಇಟ್ಟಿದ್ದು ನಮ್ಮ ಶಂಕರ್ ನಾಗ್.
ಅಂದಿನ ಜನಪ್ರಿಯ ಮತ್ತು ಅಷ್ಟೇ ಕ್ರಿಯಾಶೀಲ ವ್ಯಕ್ತಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಅವರಿಗೆ ಶಂಕರ್ ಆತ್ಮೀಯ ಗೆಳೆಯ, ಜೊತೆಗೆ ಅಚ್ಚುಮೆಚ್ಚಿನ ವ್ಯಕ್ತಿ. ಇವರು ಹಲವಾರು ರಾಜ್ಯಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು ಉದಾಹರಣೆಗೆ, ನೋಡಿ ಸ್ವಾಮಿ ನಾವಿರೋದೆ ಹೀಗೆ ಚಿತ್ರಕ್ಕಾಗಿ ಎರಡು ಬಾರಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ರಾಜ್ಯಸರ್ಕಾರದ ವತಿಯಿಂದ ತಮ್ಮದಾಗಿಸಿಕೊಂಡರು.
‘ಆಕ್ಸಿಡೆಂಟ್’ 1988–89ರ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಎಂದು ರಾಜ್ಯ ಸರ್ಕಾರವಷ್ಟೇ ಅಲ್ಲದೆ ಪಾನನಿಷೇಧದ ಬಗೆಗಿನ ಉತ್ತಮ ಚಿತ್ರವೆಂದು ಪರಿಗಣಿತವಾಗಿ ರಜತ ಕಮಲ ಮತ್ತು ನಗದು ಬಹುಮಾನವನ್ನು ರಾಷ್ಟ್ರ ಪ್ರಶಸ್ತಿಯಾಗಿ ಪಡೆದರು.

ಕನ್ನಡ ಚಿತ್ರೋಧ್ಯಮಕ್ಕೆ ಕಂಪೂಟರ್ ಚಾಲಿತ ಶಬ್ದಗ್ರಹಣ ತಂತ್ರಜ್ಜಾನವನ್ನು ಕೊಡುಗೆಯಾಗಿತ್ತ ಸಂಕೇತ್ ಸ್ಟುಡಿಯೋ ಶಂಕರ್ ನಾಗ್ ಅವರ ಮತ್ತೊಂದು ಕಲಾ ಕೊಡುಗೆಯಾಗಿತ್ತು.
ಗಿರೀಶ್ ಕಾರ್ನಾಡ್‌ ನಿರ್ದೇಶನದ ಉತ್ಸವ್ ಎಂಬ ಹಿಂದಿ ಚಿತ್ರದಲ್ಲಿಯೂ ಶಂಕರ್ ನಾಗ್ ಅಭಿನಯಿಸಿದ್ಧರು. 30 ಸೆಪ್ಟೆಂಬರ್, 1990 ರಂದು ದಾವಣಗೆರೆಯ ಹಳ್ಳಿಯೊಂದಾದ ಅನಗೋಡು ಹಳ್ಳಿಯಲ್ಲಿ ಜೋಕುರಸ್ವಾಮಿ ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಧಾರವಾಡದಿಂದ ತೆರಳುತ್ತಿದ್ದ ಶಂಕರ್ ನಾಗ್ ಅವರು ಕಾರು ಅಪಘಾತದಲ್ಲಿ ಕೊನೆಯುಸಿರೆಳೆದರು.

ಅಂದು ಕನ್ನಡ ಚಿತ್ರರಂಗದ ಅಪೂರ್ವ ನಕ್ಷತ್ರವೊಂದು ಕಳಚಿ ಬಿದ್ದಿತು. ಇಂದಿಗೂ ಕನ್ನಡ ಸಿನಿರಸಿಕರು ಶಂಕರ್ ನಾಗ್ ಅವರನ್ನು ಪ್ರೀತಿಯಿಂದಲೇ ಶಂಕ್ರಣ್ಣ ಎಂದು ಕರೆಯುತ್ತಾರೆ.
Exit mobile version