Pune: ರಾಷ್ಟ್ರವು ಪ್ರಜಾಪ್ರಭುತ್ವದ ಅಡಿಯಲ್ಲಿ ನಡೆಯಬೇಕು. ಆದರೆ, ನಾವು ಚಿಂತಿಸುತ್ತಿದ್ದೇವೆ. ಬಿಜೆಪಿ ಸಂವಿಧಾನದಲ್ಲಿ ಬದಲಾವಣೆ ಮಾಡಲು ಬಯಸಿದೆ ಹಾಗಾಗಿಯೇ ಈ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಯಸುತ್ತಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ (Sharad Pavaar) ಭಾನುವಾರ ಹೇಳಿದ್ದಾರೆ.
ಬಾರಾಮತಿ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಪುಣೆಯ ಸಾಸ್ವಾದ್ ತೆಹಸಿಲ್ನಲ್ಲಿ ( Saswaad Tehsil) ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್, ಈ ವರ್ಷದ ಸಾರ್ವತ್ರಿಕ ಚುನಾವಣೆಯು ಈ ಹಿಂದಿನ ಚುನಾವಣೆಗಳಿಗಿಂತ ಭಿನ್ನವಾಗಿದೆ. ಏಕೆಂದರೆ, ದೇಶವು ಯಾವ ವಿಧಾನದಿಂದ ಕೆಲಸ ಮಾಡುತ್ತದೆ ಎಂಬುದನ್ನು ಅದು ನಿರ್ಧರಿಸುತ್ತದೆ.ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Aravind Kejriwal) ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಬಿಜೆಪಿ (BJP) ಸರ್ವಾಧಿಕಾರದ ಹಾದಿಯಲ್ಲಿ ನಡೆದು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ.
ಆದ್ದರಿಂದ, ನಮ್ಮ ದೇಶವನ್ನು ಉಳಿಸಲು ನಾವು ಅವರನ್ನು ಸೋಲಿಸಬೇಕಾಗಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಎನ್ಸಿಪಿ ಹಾಲಿ ಸಂಸದ ಮತ್ತು ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರನ್ನು ಬಾರಾಮತಿಯಿಂದ ಕಣಕ್ಕಿಳಿಸಿದೆ. ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pavar) ಅವರ ಪತ್ನಿ ಸುನೇತ್ರಾ ಪವಾರ್ ವಿರುದ್ಧ ಸ್ಪರ್ಧಿಸಿದ್ದಾರೆ. ಉತ್ತಮ ಅಭಿವೃದ್ಧಿಗಾಗಿ ಸುಪ್ರಿಯಾ ಸುಳೆಗೆ ಮತ ನೀಡಿ ಮತ್ತು ಅವರನ್ನು ಭಾರಿ ಅಂತರದಿಂದ ಗೆಲ್ಲಿಸಿ. ನಾವು ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತೇವೆ ಎಂದಿದ್ದಾರೆ.