ಮತ್ತೆ ಕುಸಿತ ಕಂಡ ಷೇರು ಮಾರುಕಟ್ಟೆ!

ಉಕ್ರೇನ್-ರಷ್ಯಾ ಯುದ್ದ ಭೀತಿ ಹಿನ್ನೆಲೆಯಲ್ಲಿ ಷೇರು ಪೇಟೆ ಸೂಚ್ಯಂಕದಲ್ಲಿ ಭಾರೀ ಕುಸಿತಕಂಡಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿಯೇ 1,000ಕ್ಕೂ ಅಧಿಕ ಅಂಕ ಕುಸಿತ ಕಂಡಿದೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 1,004 ಅಂಕಗಳಷ್ಟು ಭಾರೀ ಇಳಿಕೆಯಾಗಿದ್ದು, 56,680 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ದೆಹಲಿಯಲ್ಲಿರುವ ಭಾರತೀಯ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್ಎಸ್ಇ) ನಿಫ್ಟಿ ಕೂಡ 285 ಅಂಕಗಳಷ್ಟು ಕುಸಿತವಾಗಿದ್ದು, 16,922 ಅಂಕಗಳಿಗೆ ಇಳಿಕೆಯಾಗಿದೆ.

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಷೇರು ಮೌಲ್ಯ ಭಾರೀ ಕುಸಿತ ಕಂಡಿದೆ. ಇನ್ನು ಡಾ.ರೆಡ್ಡೀಸ್, ಎಲ್ ಯಂಡ್ ಟಿ, ಟಿಸಿಎಸ್, ಟೆಕ್ ಮಹೀಂದ್ರ, ಎಚ್ಡಿಎಫ್ಸಿ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳ ಮೌಲ್ಯ ಶೇ.3.06 ರಷ್ಟು ಕುಸಿತ ಕಂಡಿದೆ. ಸೋಮವಾರ ಮುಂಬೈ ಷೇರುಪೇಟೆಯ ಸೆನ್ಸೆಕ್ಸ್ 149 ಅಂಕಗಳ ಇಳಿಕೆಯೊಂದಿಗೆ 57,684 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಎನ್ಎಸ್ಇ ನಿಫ್ಟಿ 70 ಅಂಕ ಕುಸಿದಿದ್ದು, 17,207 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಉಕ್ರೇನ್ ಮೇಲೆ ದಾಳಿ ನಡೆಸಲು ರಷ್ಯಾ ತುದಿಗಾಲಲ್ಲಿ ನಿಂತಿದೆ ಎಂಬ ಆರೋಪದ ಬೆನ್ನಲ್ಲೇ ಉಕ್ರೇನ್ ನ ಐವರು ಸೈನಿಕರನ್ನು ಹತ್ಯೆಗೈದಿರುವುದಾಗಿ ರಷ್ಯಾ ಹೇಳಿಕೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 285 ಅಂಕಗಳಷ್ಟು ಕುಸಿತವಾಗಿದ್ದು, 16,922ಅಂಕಗಳಿಗೆ ಇಳಿಕೆಯಾಗಿದೆ.

ಟಿಸಿಎಸ್ ಷೇರು ಮೌಲ್ಯ ಭಾರೀ ಕುಸಿತ ಕಂಡಿದೆ. ಅಲ್ಲದೇ ಡಾ.ರೆಡ್ಡಿಸ್, ಯುಪಿಎಲ್ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳ ಮೌಲ್ಯ ನಷ್ಟ ಈಡಾಗಿದೆ. ಕೇವಲ ಒಎನ್ ಜಿಸಿ ಷೇರು ಮಾತ್ರ ಲಾಭಗಳಿಸಿದೆ. ಡಾ.ರೆಡೀಸ್, ಎಲ್ ಆ್ಯಂಡ್ ಟಿ, ಟಿಪಿಎಸ್, ಟೆಕ್ ಮಹೀಂದ್ರ, ಎಚ್ ಡಿಎಫ್ ಸಿ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳ ಮೌಲ್ಯ ಶೇ.3.06ರಷ್ಟು ಕುಸಿತ ಕಂಡಿದೆ. ಸೋಮವಾರ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 149 ಅಂಕಗಳ ಇಳಿಕೆಯೊಂದಿಗೆ 57,684 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಎನ್ ಎಸ್ ಇ ನಿಫ್ಟಿ 70 ಅಂಕ ಕುಸಿದಿದ್ದು, 17,207 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು

Exit mobile version