ಮುಂಬಯಿ: ಮುಂಬೈ ಷೇರು ಮಾರುಕಟ್ಟೆಯಲ್ಲಿ ಇಂದು ಕೊಂಚ ಕುಸಿತ ಕಂಡಿದ್ದು, ಕೆಲವು ಷೇರುಗಳು ಲಾಭಗಳಿಸುವಲ್ಲಿ ಯಶಸ್ವಿಯಾಗಿದೆ. ಜಾಗತಿಕ ಷೇರುಮಾರುಕಟ್ಟೆಯ ನೆಗೆಟಿವ್ ಟ್ರೆಂಡ್ ಪರಿಣಾಮ ಗುರುವಾರ ಮುಂಬಯಿ ಷೇರು ಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 104.67 ಅಂಕಗಳಷ್ಟು ಇಳಿಕೆಯಾಗಿದ್ದು, 57,892.01 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 17.60 ಅಂಕಗಳಷ್ಟು ಕುಸಿತ ಕಂಡಿದ್ದು, 17304.60 ಅಂಕಗಳ ಮಟ್ಟದಲ್ಲಿದೆ.

ಬುಧವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 145,37 ಅಂಕ ಇಳಿಕೆಯಾಗಿದ್ದು, 57,996.68 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 30.30 ಅಂಕಗಳಷ್ಟು ಕುಸಿತದೊಂದಿಗೆ 17,322.20 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿತ್ತು. ಐಸಿಐಸಿಐ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್ , ಅಲ್ವಾಟೆಕ್ ಸಿಮೆಂಟ್, ಇಂಡಸ್ ಇಂಡ್ ಬ್ಯಾಂಕ್ ಮತ್ತು ಯುಪಿಎಲ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಟಾಟಾ ಕನ್ಸೂಮರ್ ಪ್ರಾಡಕ್ಟ್, ಒಎನ್ ಜಿಸಿ, ಎಚ್ ಡಿಎಫ್ ಸಿ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಚ್ ಡಿಎಫ್ ಸಿ ಲೈಫ್ ಷೇರುಗಳು ಲಾಭಗಳಿಸಿದೆ.
ಅನಿಲ್ ಅಂಬಾನಿಗೆ ನಿರ್ಬಂಧ :

ರಿಲಯನ್ಸ್ ಹೋಮ್ ಫೈನಾನ್ಸ್, ಅನಿಲ್ ಅಂಬಾನಿ, ಸೇರಿ ಇತರ ಮೂವರಿಗೆ ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ಸೆಬಿ ನಿರ್ಬಂಧಿಸುತ್ತದೆ.
ಸೆಬಿ ಫೆಬ್ರವರಿ 11 ರಂದು ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್, ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮತ್ತು ಇತರ ಮೂವರು ವ್ಯಕ್ತಿಗಳನ್ನು ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ಕಂಪನಿಯಿಂದ ಹಣವನ್ನು ವಂಚಿಸಿದ ಆರೋಪದ ಮೇಲೆ ನಿರ್ಬಂಧಿಸಿದೆ.