Visit Channel

ಹೊಸಬರ ಹೊಸ ಚಿತ್ರದೊಂದಿಗೆ ಶಶಾಂಕ್

WhatsApp Image 2021-04-29 at 1.12.32 PM

ನಿರ್ದೇಶಕ ಶಶಾಂಕ್ ಮತ್ತೊಮ್ಮೆ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ. “ಶಶಾಂಕ್ ಸಿನೆಮಾಸ್” ಸಂಸ್ಥೆಯಡಿ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗಲಿರುವ ಈ ಚಿತ್ರದ ಮುಖಾಂತರ, ‘ಪ್ರವೀಣ್’ ಎಂಬ ಹೊಸ ನಾಯಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ವೈದ್ಯಕೀಯ ಪದವೀಧರರಾದ ಪ್ರವೀಣ್, ಹೊಸಪೇಟೆ ಮೂಲದವರಾಗಿದ್ದು, ನಟನಾಗುವ ಆಸಕ್ತಿಯಿಂದ ಅದಕ್ಕೆ ಬೇಕಾಗುವ ಎಲ್ಲಾ ತರಬೇತಿಗಳನ್ನು ಪಡೆದು ಬೆಳ್ಳಿತೆರೆ ಏರಲು ಸಜ್ಜಾಗಿದ್ದಾರೆ.

ಇನ್ನೂ ಶೀರ್ಷಿಕೆ ನಿಗದಿಯಾಗದ, ಭಾವುಕ ಪ್ರೇಮಕಥೆಯ ಈ ಚಿತ್ರಕ್ಕೆ ಶಶಾಂಕ್ ಹೊಸ ನಾಯಕಿಯ ಹುಡುಕಾಟದಲ್ಲಿದ್ದಾರೆ. ಲಾಕ್ಡೌನ್ ಗೂ ಮುನ್ನ ಸರಳವಾಗಿ ಮುಹೂರ್ತ ನೆರವೇರಿದ್ದು, ಲಾಕ್ಡೌನ್ ಮುಗಿದ ನಂತರ ಫೋಟೋಶೂಟ್ ಮಾಡಿ, ಶೀರ್ಷಿಕೆಯ ಜೊತೆ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. ಜೂನ್ ತಿಂಗಳಲ್ಲಿ ಚಿತ್ರೀಕರಣ ಆರಂಭಿಸಲಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಲಿದ್ದಾರೆ. ಉಳಿದ ತಾರಾಗಣ ಮತ್ತು ತಾಂತ್ರಿಕ ವರ್ಗದ ಆಯ್ಕೆ ನಡೆಯುತ್ತಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.