“ಹಾರಿಹೊಯ್ತಾ ಸಮಾಜವಾದ ?”ಸದ್ದಿಲ್ಲದೇ ಮಗನಿಗೆ ಸಾಂವಿಧಾನಿಕ ಹುದ್ದೆ ನೀಡಿದ ಸಿದ್ದರಾಮಯ್ಯ

Bengaluru: ಸದ್ದಿಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮಗ ಯತೀಂದ್ರ ಸಿದ್ದರಾಮಯ್ಯನವರಿಗೆ (Shelter Committee Chairman Yathindra) ಸಾಂವಿಧಾನಿಕ ಹುದ್ದೆ ನೀಡಿದ್ದಾರೆ.

ಅಚ್ಚರಿ ಅಂದರೆ 15 ದಿನಗಳ ಹಿಂದೆಯೇ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ಈ ಸಂಗತಿ ಇದೀಗ ಬೆಳಕಿಗೆ ಬಂದಿದ್ದು, ಸಿದ್ದರಾಮಯ್ಯನವರ ಈ ನಡೆಗೆ ಸಾಮಾಜಿಕ

ಜಾಲತಾಣದಲ್ಲಿ ಭಾರೀ ವಿರೋಧ (Shelter Committee Chairman Yathindra) ವ್ಯಕ್ತವಾಗುತ್ತಿದೆ.


ಇನ್ನು ಈ ಸಂಗತಿಯನ್ನು ಯತೀಂದ್ರ ಸಿದ್ದರಾಮಯ್ಯ ಅವರೇ ಬಹಿರಂಗಪಡಿಸಿದ್ದು, ನನ್ನನ್ನು ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 15 ದಿನಗಳ ಹಿಂದೆಯೇ ಆದೇಶವಾಗಿದ್ದು,

ಇನ್ನು ಮುಂದೆ ಜನರ ಸಮಸ್ಯೆಯನ್ನು ನಾನು ಆಲಿಸುತ್ತೇನೆ ಎಂದು ಹೇಳಿದ್ದಾರೆ. ಇದೀಗ ಸದ್ದಿಲ್ಲದೇ ಯತೀಂದ್ರ ಸಿದ್ದರಾಮಯ್ಯ ಅವರನ್ನ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ 15 ದಿನಗಳ

ಹಿಂದೆಯೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಸ್ವತಃ ಯತೀಂದ್ರ ಅವರೇ ಹೇಳಿದ ಬಳಿಕ ಮಹಿತಿ ಹೊರಬಿದ್ದಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.


ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಡೆಗೆ ಅನೇಕರು ತೀವ್ರ ಅಸಮಾಧಾನ ಹೊರಹಾಕಿದ್ದು, ಮನನನ್ನೇ ಸಾಂವಿಧಾನಿಕ ಹುದ್ದೆಗೆ ನೇಮಕ ಮಾಡುವ ಮೂಲಕ ಸಿದ್ದರಾಮಯ್ಯನವರ ಸಮಾಜವಾದ

ಹಾರಿಹೋಗಿದೆ ಎಂದು ಟೀಕಿಸಿದ್ದಾರೆ. ರಾಜಕೀಯ ನಾಯಕರು ತಮ್ಮ ಮಕ್ಕಳನ್ನು ತಮ್ಮ ಪಕ್ಷದೊಳಗಿನ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಿ. ಆದರೆ ಈ ರೀತಿಯ ಸಾಂವಿಧಾನಿಕ ಹುದ್ದೆಗಳಿಗೆ ನೇಮಕ

ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅನೇಕರು ಹೇಳಿದ್ದಾರೆ.

ರಕ್ಷಾಬಂಧನ ಹಬ್ಬಕ್ಕೆ ರಾಖಿ ಕಟ್ಟಲು ಅಣ್ಣ ಬೇಕೆಂದು ಹಠ ಹಿಡಿದ ಮಗಳು : ಗಂಡು ಮಗು ಕದ್ದು ಸಿಕ್ಕಿಬಿದ್ದ ದಂಪತಿ

ಇನ್ನು ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ. ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ

ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ ಯತೀಂದ್ರ ಸಿದ್ದರಾಮಯ್ಯನವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ, ಅದು ಗುಟ್ಟಾಗಿ.

ತಮ್ಮದು ಪಾರದರ್ಶಕ ಸರ್ಕಾರ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು ಎಂದು ವಾಗ್ದಾಳಿ ನಡೆಸಿದೆ.

Exit mobile version