Bangalore : ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು (Channapatna, Shiggavi, Sandur) ವಿಧಾನಸಭಾ ಕ್ಷೇತ್ರಗಳಲ್ಲಿ ಇವತ್ತು ಉಪಚುನಾವಣೆ ಮತದಾನ (By-election voting) ನಡೆಯಲಿದ್ದು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ (Congress) ಹಾಗೂ ಪ್ರತಿಪಕ್ಷಗಳಾಗಿರುವ ಬಿಜೆಪಿ-ಜೆಡಿಎಸ್ (BJP – JDS ) ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ (by-elections) ಮತದಾನ ಪ್ರಕ್ರಿಯೆ ಇಂದು ಆರಂಭವಾಗಿದ್ದು, 45 ಮಂದಿ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜೊತೆಗೆ ಸೂಕ್ತ ಬಂದೋಬಸ್ತ್ ಕೈಗೊಂಡಿವೆ.ಮೂರು ಕ್ಷೇತ್ರಗಳ ಪೈಕಿ ರಾಮನಗರ ಜಿಲ್ಲೆಯ (Ramnagar district) ಚನ್ನಪಟ್ಟಣ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಆಡಳಿತ ಪಕ್ಷ ಕಾಂಗ್ರೆಸ್ (Congress) ಹಾಗೂ ಮಿತ್ರ ಪಕ್ಷಗಳಾದ ಬಿಜೆಪಿ-ಜೆಡಿಎಸ್ಗೆ (BJP – JDS) ಚನ್ನಪಟ್ಟಣ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಚನ್ನಪಟ್ಟಣದಲ್ಲಿ (Channapatnam) ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) , ಕಾಂಗ್ರೆಸ್ನಿಂದ (Congress) ಸಿಪಿ ಯೋಗೇಶ್ವರ್ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆಗಳಿದ್ದು, 62 ನಗರ ವ್ಯಾಪ್ತಿ ಹಾಗೂ 214 ಗ್ರಾಮಾಂತರ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.
ಇನ್ನು ಚನ್ನಪಟ್ಟಣ ಕ್ಷೇತ್ರದಲ್ಲಿ (Channapatnam Constituency) ಒಟ್ಟು 2,32,949 ಮತದಾರರಿದ್ದು, 1,12,324 ಪುರುಷ ಹಾಗೂ 1,20,617 ಮಹಿಳಾ ಮತದಾರರಿದ್ದಾರೆ. 8 ಜನ ತೃತೀಯ ಲಿಂಗಿಗಳಿದ್ದಾರೆ. 85 ವರ್ಷಕ್ಕೂ ಮೇಲ್ಪಟ್ಟ ಒಟ್ಟು 1,613 ಮತದಾರರಲ್ಲಿ 612 ಪುರುಷರು ಹಾಗೂ 1,001 ಮಹಿಳೆಯರಿದ್ದಾರೆ. 3,011 ಜನ ದಿವ್ಯಾಂಗರಲ್ಲಿ 1,669 ಪುರುಷ ಹಾಗೂ 1,342 ಮಹಿಳಾ ಮತದಾರರಿದ್ದಾರೆ. ಇನ್ನು 8,338 ಯುವ ಮತದಾರರಿದ್ದಾರೆ. ಜೊತೆಗೆ 47 ಸೇವಾ ಮತದಾರರು ಮತಹಕ್ಕು ಹೊಂದಿದ್ದಾರೆ.
ಶಿಗ್ಗಾಂವಿ ಕ್ಷೇತ್ರದಲ್ಲಿ (Shiggamvi) ಎನ್ಡಿಎ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ನಿಂದ ಯಾಸೀರ್ ಖಾನ್ (Yasir Khan) ಪಠಾಣ್ ನಡುವೆ ನೇರ ಹಣಾಹಣಿ ಇದೆ. ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ- 2,37,525. ಈ ಪೈಕಿ 1,21,443 ಪುರುಷರು ಮತ್ತು 1,16,076 ಮಹಿಳೆಯರು ಹಾಗೂ ಇತರ 6 ಮತದಾರರಿದ್ದಾರೆ. ಒಟ್ಟು 241 ಮತಗಟ್ಟೆಗಳಿದ್ದು, 92 ಸೂಕ್ಷ್ಮ ಮತ್ತು 141 ಸಾಮಾನ್ಯ ಮತಟ್ಟೆಗಳಿವೆ. ಭದ್ರತೆಗಾಗಿ ಎಸ್ಪಿ, ಎಎಸ್ಪಿ (SP, ASP) , 4 ಡಿವೈಎಸ್ಪಿ, 12 ಸಿಪಿಐ, 24 ಪಿಎಸ್ಐ, 68 ಎಎಸ್ಐ, ಸೇರಿ 716 ಪೊಲೀಸ್ ಸಿಬ್ಬಂದಿ ಜೊತೆಗೆ 4 ಕೆಎಸ್ಆರ್ಪಿ ಮತ್ತು ಡಿಆರ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಇನ್ನು ಸಂಡೂರು ಕ್ಷೇತ್ರದಲ್ಲಿ (Sandur constituency) ಕಾಂಗ್ರೆಸ್ನಿಂದ ಅನ್ನಪೂರ್ಣ ತುಕಾರಾಂ (Annapurna Tukaram) ಮತ್ತು ಎನ್ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮಂತು (Bangaru hanumantu) ಕಣದಲ್ಲಿದ್ದಾರೆ. ಇಲ್ಲಿ ಒಟ್ಟು 253 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1,215 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರಿದ್ದಾರೆ. ಈ ಪೈಕಿ 1,17,789 ಪುರುಷ ಮತ್ತು 1,18,282 ಮಹಿಳೆ ಹಾಗೂ 29 ತೃತೀಯ ಲಿಂಗಿ ಮತದಾರರು ಇದ್ದಾರೆ.ಒಟ್ಟಾರೆ ಮೂರು ವಿಧಾನಸಭಾ (Three assembly) ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 23 ಕ್ಕೆ ಉಪಚುನಾವಣೆಯ ಫಲಿತಾಂಶ ಹೊರ ಬೀಳಲಿದೆ.