Visit Channel

ಶೀಘ್ರವೇ ಸಂಪುಟ ವಿಸ್ತರಣೆ ಸಿಹಿ ಸುದ್ಧಿ

cm-new

ಬೆಂಗಳೂರು, ನ. 27: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಈಗಷ್ಟೇ ದೂರವಾಣಿಯಲ್ಲಿ ಕೇಂದ್ರ ಗೃಹ ಸಚಿವರ ಅಮಿತ್ ಷಾ ಜತೆ ಮಾತನಾಡಿದ್ದು, ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ಪಟ್ಟಿ ಕಳುಹಿಸಿಕೊಡುವುದಾಗಿ ಹೇಳಿದ್ದು, ವಿಸ್ತರಣೆ ವಿಷಯ ಸುಗಮವಾಗಿ ಬಗೆಹರಿಯಲಿದ್ದು, ಸಿಹಿ ಸುದ್ದಿ ಶೀಘ್ರದಲ್ಲೇ  ದೊರಕಲಿದೆ ಎಂದು  ಸಿ ಎಂ ಯಡಿಯೂರಪ್ಪ ಅವರು ಹೇಳಿದ್ದಾರೆ. 

ವೀರಶೈವ ಲಿಂಗಾಯಿತರನ್ನು ಓಬಿಸಿಗೆ ಸೇರಿಸುವ ಬಗ್ಗೆ ವಿಚಾರ ಇಂದು ಯಾವುದೇ ತೀರ್ಮಾನ ಮಾಡುವುದಿಲ್ಲ. ಮಹತ್ವದ ಕಾರಣಕ್ಕೆ ಲಿಂಗಾಯಿತರನ್ನು ಬಗ್ಗೆ ಓಬಿಸಿಗೆ ಸೇರಿಸಲು ನಿರ್ಧರಿಸಿದ್ದೆವು. ಆದರೆ ದೆಹಲಿಗೆ ಹೋಗಿ ಪ್ರಮುಖರು ಹಾಗೂ ತಜ್ಞರ ಜೊತೆ ಚರ್ಚಿಸಿದ ಬಳಿಕ ಅದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.

ಅಲ್ಲಿಯವರೆಗೆ ಯಾವುದೇ ಆತುರದ ತೀರ್ಮಾನ ಕೈಗೊಳ್ಳದಂತೆ ಸಂಪುಟ ಸಹೋದ್ಯೋಗಿಗಳು ಸಲಹೆ ಮಾಡಿದ್ದಾರೆ. ಹಾಗಾಗಿ ದೆಹಲಿಗೆ ಹೋಗಿ ಬಂದ ಬಳಿಕವಷ್ಟೇ ಲಿಂಗಾಯತ ಮೀಸಲಾತಿ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಮೀಸಲಾತಿ ಸಂಬಂಧ ತಜ್ಞರ ಸಮಿತಿ ರಚನೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.