ಮುಂಬೈ, ಮಾ. 16: ಒಂದೆಡೆ ಬೆಳಗಾವಿಯಲ್ಲಿ ಕನ್ನಡಿಗರು ಹಾಗೂ ಮರಾಠಿಗರ ನಡುವೆ ಜಟಾಪಟಿ ಶುರುವಾಗಿದ್ದರೆ, ಇತ್ತ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು ಎಂದು ಶಿವಸೇನಾ ಹೇಳಿದೆ.
ಪಕ್ಷದ ಮುಖವಾಣಿ ʻಸಾಮ್ನಾʼದ ಸಂಪಾದಕೀಯದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದು, ಬೆಳಗಾವಿಯಲ್ಲಿ ಮರಾಠಿ ಭಾಷಿಕರ ಮೇಲೆ ಕನ್ನಡಪರ ಸಂಘಟನೆಗಳಿಂದ ದೌರ್ಜನ್ಯ ಹೆಚ್ಚಿದೆ. ಬೆಳಗಾವಿಯಲ್ಲಿ ಮರಾಠಿ ಮಾತನಾಡುವವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಟೀಕಿಸಿದೆ.
ಅಂಗಡಿಗಳಿಗೆ ಅಳವಡಿಸಿದ್ದ ಮರಾಠಿ ಫಲಕಗಳನ್ನು ಕಿತ್ತೆಸೆಯಲಾಗಿದೆ. ಕರ್ನಾಟಕ ಪೊಲೀಸರು ಸಹ ಮರಾಠಿ ಭಾಷಿಕರಿಗೆ ಕಿರುಕುಳ ನೀಡುತ್ತಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ಇಂಥ ದುಷ್ಕೃತ್ಯಗಳನ್ನು ಬೆಂಬಲಿಸುತ್ತಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಶಿವಸೇನಾ ಆರೋಪಿಸಿದೆ.