Thiruvananthapuram : ಚಂದ್ರಯಾನ – 3 ಲ್ಯಾಂಡರ್ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ (Shiva Shakti right name) ಮೇಲೆ ಯಶಸ್ವಿಯಾಗಿ ಇಳಿದ ನಂತರ ಬೆಂಗಳೂರಿನಲ್ಲಿರುವ

ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ವಿಕ್ರಂ ಲ್ಯಾಂಡರ್ ಇಳಿದ ಸ್ಥಳಕ್ಕೆ “ಶಿವಶಕ್ತಿ” ಎಂದು ನಾಮಕರಣ ಮಾಡಿದ್ದರು. ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು.
ಈ ಕುರಿತು ಮಾತನಾಡಿರುವ ಇಸ್ರೋ ನಿರ್ದೇಶಕ ಸೋಮನಾಥ್ ಅವರು, ಲ್ಯಾಂಡರ್ ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್ ಎಂದು ಪ್ರಧಾನಿ ನರೇಂದ್ರ ಮೋದಿ ನಾಮಕರಣ ಮಾಡಿದ್ದರಲ್ಲಿ ಯಾವುದೇ
ತಪ್ಪಿಲ್ಲ. ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ (Shiva Shakti right name) ಅವಶ್ಯಕ ಎಂದು ಹೇಳಿದ್ದಾರೆ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೊಸ ದಾಖಲೆ ಬರೆದ ನೀರಜ್ ಚೋಪ್ರಾ
ಚಂದ್ರಯಾನ-3 ಮಿಷನ್ ಯಶಸ್ವಿಯಾದ ಬಳಿಕ ತವರು ರಾಜ್ಯ ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು-ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿ ಮಾದ್ಯಮಗಳೊಂದಿಗೆ
ಮಾತನಾಡಿದ ಅವರು, ವಿಕ್ರಂ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ಜಾಗಕ್ಕೆ ‘ಶಿವಶಕ್ತಿ’ ಎಂದು ಪ್ರದಾನಿ ನರೇಂದ್ರ ಮೋದಿ ಅವರು ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆ ಸ್ಥಳಕ್ಕೆ ಹೆಸರಿಡುವ
ಹಕ್ಕು ದೇಶಕ್ಕೆ ಇದೆ ಎಂದರು. ಇನ್ನು ಪ್ರಧಾನಿ ಮೋದಿ ಅವರು ಎಲ್ಲರಿಗೂ ಸರಿಹೊಂದುವ ರೀತಿಯಲ್ಲಿ ಶಿವಶಕ್ತಿ ಪದದ ಅರ್ಥವನ್ನು ವಿವರಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ.

ಇದೇ ವೇಳೆ ಚಂದ್ರಯಾನ–2 ಕ್ರಾಶ್ ಆಗಿದ್ದ ಸ್ಥಳಕ್ಕೆ ‘ತಿರಂಗಾ ಪಾಯಿಂಟ್ʼ ಎಂದು ಹೆಸರಿಟ್ಟಿದ್ದಾರೆ. ಎರಡೂ ಪದಗಳು ಭಾರತೀಯ ಧ್ವನಿಯ ಹೆಸರುಗಳಾಗಿವೆ. ಈ ಹೆಸರುಗಳಲ್ಲಿ ನಾವು ಏನು ಮಾಡುತ್ತಿದ್ದೇವೆ
ಎಂಬುದರ ಮಹತ್ವ ನಮಗೆ ತಿಳಿಯುತ್ತದೆ ಎಂದು ಸೋಮನಾಥ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ನಾನು ವಿಜ್ಞಾನಿ ಅಂದರೆ ಅನ್ವೇಷಕ. ನಾನು ಚಂದ್ರನನ್ನು ಅನ್ವೇಷಿಸುತ್ತೇನೆ. ಅದೇ ರೀತಿ ನನ್ನೊಳಗಿನ ಆಂತರಂಗದ ಜಾಗವನ್ನು ಅನ್ವೇಷಿಸುತ್ತೇನೆ. ಬಾಹ್ಯ ಹುಡುಕಾಟಕ್ಕೆ ವಿಜ್ಞಾನವಾದರೆ, ಅಂತರಂಗದ
ಹುಡುಕಾಟಕ್ಕೆ ಆಧ್ಯಾತ್ಮ ನೆರವು ಬೇಕಿದೆ. ಹೀಗಾಗಿಯೇ ನಾನು ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ. ಬ್ರಹ್ಮಾಂಡದಲ್ಲಿ ನಮ್ಮ ಅಸ್ತಿತ್ವ ಮತ್ತು ನಮ್ಮ ಪ್ರಯಾಣದ ಅರ್ಥವನ್ನು ಕಂಡುಹಿಡಿಯಲು
ಸದಾ ಪ್ರಯತ್ನಿಸುತ್ತೇನೆ. ಇದು ಸಾವಿರಾರೂ ವರ್ಷಗಳಿಂದ ನಮ್ಮ ಸಂಸ್ಕೃತಿಯ ಭಾಗವಾಗಿದೆ ಎಂದು ಸೋಮನಾಥ್ ಅವರು ಹೇಳಿದ್ಧಾರೆ.