• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹುಣಸೋಡು ಸ್ಪೋಟ ಪ್ರಕರಣ: ಹೈಕೋರ್ಟ್‌ನ ನ್ಯಾಯಾಧೀಶರಿಂದ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಸಿದ್ದರಾಮಯ್ಯ ಆಗ್ರಹ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಹುಣಸೋಡು ಸ್ಪೋಟ ಪ್ರಕರಣ: ಹೈಕೋರ್ಟ್‌ನ ನ್ಯಾಯಾಧೀಶರಿಂದ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಸಿದ್ದರಾಮಯ್ಯ ಆಗ್ರಹ
0
SHARES
1
VIEWS
Share on FacebookShare on Twitter

ಬೆಂಗಳೂರು, ಫೆ. 01: ಶಿವಮೊಗ್ಗದ‌ ಹುಣಸೋಡು ಗ್ರಾಮದಲ್ಲಿ ನಡೆದ ಸ್ಪೋಟ ಪ್ರಕರಣದ ಕುರಿತು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕು ಹಾಗೂ ಬೇಜವಾಬ್ದಾರಿತನದಿಂದ ಘಟನೆಗೆ ಕಾರಣರಾದ ಜಿಲ್ಲೆಯ ಎಲ್ಲ‌ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹುಣಸೋಡಿನಲ್ಲಿ ಸುಮಾರು 1350 ಕೆ.ಜಿ ಸ್ಪೋಟಕ ಸ್ಪೋಟಗೊಂಡು 6 ಜನ ಸಾವಿಗೀಡಾಗಿದ್ದಾರೆ, ಹಲವು ಮನೆಗಳಿಗೆ ಹಾನಿಯಾಗಿದೆ, ಸಮೀಪದ ಗ್ರಾಮಸ್ಥರು ಗಾಯಗೊಂಡಿದ್ದಾರೆ. ಇದು ಪುಲ್ವಾಮಗಿಂತ ದೊಡ್ಡ ಸ್ಪೋಟ. ಪುಲ್ವಾಮದಲ್ಲಿ 250 ಕೆ.ಜಿ ಸ್ಫೋಟಕ ಸ್ಪೋಟಿಸಿದ್ದರೆ, ಇಲ್ಲಿ ಅದರ 5 ಪಟ್ಟಿಗೂ ಹೆಚ್ಚಿನ ಜಿಲೆಟಿನ್ ಸ್ಪೋಟಗೊಂಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ 97 ಕ್ರಷರ್‌ಗಳಿಗೆ ಮತ್ತು 76 ಕ್ವಾರಿಗಳಿಗೆ ಮಾತ್ರ ಕಲ್ಲು ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ. ಪರವಾನಗಿ ಇಲ್ಲದೆ ಜಿಲ್ಲೆಯಲ್ಲಿ 200ಕ್ಕೂ ಅಧಿಕ ಕ್ರಷರ್‌ಗಳು ಕೆಲಸ ಮಾಡುತ್ತಿವೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆಯುತ್ತಿದೆ ಅಂದರೆ ಇದಕ್ಕೆ ಯಾರು ಹೊಣೆ?

ಹುಣಸೋಡಿನ ಯಶಸ್ ಸ್ಟೋನ್ ಕ್ರಷರ್ ಮೇಲೆ 2018ರ ಏಪ್ರಿಲ್ ತಿಂಗಳಿನಲ್ಲೇ ಅನಧಿಕೃತವಾಗಿ ಸ್ಪೋಟಕ ಬಳಕೆ ಮಾಡಿದ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ. ಈ ವಿಚಾರ ಜಿಲ್ಲೆಯ ಅಧಿಕಾರಿಗಳ ಗಮನಕ್ಕೆ ಬಂದಿದ್ದರೂ ಈ ವರೆಗೆ ಗಣಿಗಾರಿಕೆ ಮಾಡಲು ಹೇಗೆ ಅವಕಾಶ ನೀಡಿದರು?.

ಆಂದ್ರಪ್ರದೇಶದಿಂದ ಪ್ರತೀ 15 ದಿನಕ್ಕೊಮ್ಮೆ ಲಾರಿಯ ಮೂಲಕ ಅಕ್ರಮವಾಗಿ ಸ್ಪೋಟಕ ತರಲಾಗುತ್ತಿದೆ ಅಂತ ಹುಣಸೋಡಿನ ಗ್ರಾಮಸ್ಥರು ದೂರುತ್ತಿದ್ದಾರೆ, ಆಂದ್ರದಿಂದ ಶಿವಮೊಗ್ಗ ನಡುವೆ ಕನಿಷ್ಠ 10 ಪೊಲೀಸ್ ನಾಕಾಬಂಧಿಗಳಿವೆ, ಒಂದು ಕಡೆಯೂ ಈ ಲಾರಿಗಳ ತಪಾಸಣೆ ನಡೆಸಿ, ವಶಕ್ಕೆ ಪಡೆದಿಲ್ಲ ಅಂದರೆ ರಾಜ್ಯದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ?

ಸ್ವತಃ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಆಯನೂರ್ ಮಂಜುನಾಥ್ ಅವರೇ ಹುಣಸೋಡಿನಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿನೀಡಿದ ಸಂದರ್ಭದಲ್ಲಿ ‘ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗೆ ಅಧಿಕಾರಿಗಳು ಮತ್ತು ರಾಜಕಾರಣಿಗಳೆ ಕಾರಣ’ ಎಂದು ಆರೋಪ ಮಾಡಿರುವುದನ್ನು ಬಹಳ ಮುಖ್ಯವಾಗಿ ಗಮನಿಸಬೇಕು.

ಜನವರಿ ತಿಂಗಳ 6ನೇ ತಾರೀಖಿನಂದು ಶಿವಮೊಗ್ಗ ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಹುಣಸೋಡು, ಕಲ್ಲು ಗಂಗೂರು ಪ್ರದೇಶದಲ್ಲಿ ಕಂದಾಯ ಇಲಾಖೆಯು ಗಣಿಗಾರಿಕೆ ಉದ್ದೇಶಕ್ಕೆ ಅನಧಿಕೃತವಾಗಿ ಭೂಮಿ ಮಂಜೂರು ಮಾಡಿದೆ, ಈ ಆದೇಶಗಳನ್ನು ರದ್ದುಪಡಿಸಿ ಎಂದು ಮನವಿ ಮಾಡಿದ್ದರು.

ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ವಿಚಾರ ಜಿಲ್ಲಾಧಿಕಾರಿಗಳ ಗಮನಕ್ಕೂ ಬಂದಿದೆ, ಹಿರಿಯ ಭೂವಿಜ್ಞಾನಿಗಳ ಗಮನಕ್ಕೂ ಬಂದಿದೆ, ಪೊಲೀಸ್ ಇಲಾಖೆಗೂ ತಿಳಿದಿದೆ, ಯಾರೊಬ್ಬರೂ ಕಾನೂನು ಕ್ರಮ ಜರುಗಿಸದೆ ಕಣ್ಣುಮುಚ್ಚಿ ಕುಳಿತಿರಲು ಕಾರಣವೇನು? ಇದರ ಹಿಂದೆ ಯಾರಿದ್ದಾರೆ?.

ಹುಣಸೋಡಿನ ಸ್ಪೋಟ ದುರಂತದಲ್ಲಿ ಮಡಿದ 6 ಜನ ಬಡ ಕೂಲಿಕಾರರ ಸಾವಿನ ಹೊಣೆಯನ್ನು ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಸುಮ್ಮನಿರಿ ಅಂತ ಹೇಳಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಹೊರುತ್ತಾರೆಯೇ?

ಹುಣಸೋಡಿನಲ್ಲಿ ಸಂಭವಿಸಿದ್ದು ಬರಿಯ ಸ್ಪೋಟವಷ್ಟೇ ಅಲ್ಲ, ಅದು ಬಡ ಕೂಲಿಕಾರರ ಕೊಲೆ. ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ರಾಜ್ಯದಲ್ಲಿರುವ ಸುಮಾರು 2000ಕ್ಕೂ ಅಧಿಕ ಅನಧಿಕೃತ ಕ್ರಷರ್, ಕ್ವಾರಿಗಳನ್ನು ಮುಚ್ಚಿಸುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಹುಣಸೋಡಿನಲ್ಲಿ ಸಂಭವಿಸಿದ್ದು ಬರಿಯ ಸ್ಪೋಟವಷ್ಟೇ ಅಲ್ಲ, ಅದು ಬಡ ಕೂಲಿಕಾರರ ಕೊಲೆ. ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ರಾಜ್ಯದಲ್ಲಿರುವ ಸುಮಾರು 2000ಕ್ಕೂ ಅಧಿಕ ಅನಧಿಕೃತ ಕ್ರಷರ್, ಕ್ವಾರಿಗಳನ್ನು ಮುಚ್ಚಿಸುವ ಕೆಲಸ ಮಾಡಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ. 10/10#Session

— Siddaramaiah (@siddaramaiah) February 1, 2021

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023
ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ
Vijaya Time

ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.