ಶಿವಸೇನೆ ಸೇರಲಿದ್ದಾರೆ ನಟಿ ಊರ್ಮಿಳಾ ಮಾತೋಂಡ್ಕರ್

ಮುಂಬೈ, ನ. 30: ಕಳೆದ ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್, ಇದೀಗ ಕಾಂಗ್ರೆಸ್ ತೊರೆದು ಶಿವಸೇವೆ ಸೇರಲು ಮುಂದಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ಡಿಸೆಂಬರ್ 1ರಂದು ಮಂಗಳವಾರ ನಟಿ ಊರ್ಮಿಳಾ ಮಾತೋಂಡ್ಕರ್ ಶಿವಸೇನೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತಿದ್ದರು.
ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಭಿನ್ನಾಭಿಪ್ರಾಯ ಉಂಟಾಗಿ ಪಕ್ಷ ತೊರೆದಿದ್ದರು. ಈಗ ಅವರು ಶಿವಸೇನೆ ಸೇರ್ಪಡೆಯಾಗಲಿದ್ದು ಅವರ ಹೆಸರನ್ನು ರಾಜ್ಯಪಾಲರ ಕೋಟಾದಿಂದ ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡಲು ಶಿವಸೇನೆ ಗವರ್ನರ್ ಬಿ ಎಸ್ ಕೊಶ್ಯರಿಗೆ ರವಾನಿಸಿದೆ.

Exit mobile version