ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಮುಸ್ಲಿಂ ಸಮುದಾಯದಲ್ಲಿ ಅಧ್ಯಾತ್ಮ, ಶಿಕ್ಷಣ, ಸಮಾಜ ಸೇವೆ ಇತ್ಯಾದಿ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದ, ಕಲಬುರಗಿಯಲ್ಲಿ(Kalburgi) ಹುಟ್ಟಿದರೂ, ಕೋಲಾರವನ್ನು(Kolar) ತಮ್ಮ ಸೇವಾನೆಲೆಯನ್ನಾಗಿ ಮಾಡಿಕೊಂಡಿದ್ದ ಶ್ರೀ ಹಝ್ರತ್‌ ಶೈಖ್‌ ತಾಜುದ್ದೀನ್‌ ಜುನೈದೀ ಅವರು ನಮ್ಮನ್ನಗಲಿರುವುದು ಅಪಾರ ದುಃಖ ಉಂಟು ಮಾಡಿದೆ.

ಶ್ರೀ ಜುನೈದೀ ಅವರು ಹಾಕಿಕೊಟ್ಟ ಸೇವಾಮಾರ್ಗ ಎಲ್ಲರಿಗೂ ಪ್ರೇರಣೆಯಾಗಲಿ ಹಾಗೂ ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ದಯಪಾಲಿಸಲಿ ಮತ್ತೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಶಿಷ್ಯಕೋಟಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್‌ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಸಂತಾಪ ಸೂಚಿಸಿದ್ದಾರೆ. ಅದೇ ರೀತಿ ಖ್ಯಾತ ಗಾಯಕ ಶ್ರೀ ಶಿವಮೊಗ್ಗ ಸುಬ್ಬಣ್ಣ(Shivmoga Subbanna) ಸುಗಮ ಸಂಗೀತ ಲೋಕದ ಅನನ್ಯ ಪ್ರತಿಭೆ,

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಕುವೆಂಪು, ಬೇಂದ್ರೆ ಸೇರಿ ಹೆಸರಾಂತ ಕವಿಗಳ ಗೀತೆಗಳಿಗೆ ಸ್ವರ ಕಟ್ಟಿದ ಸುಬ್ಬಣ್ಣ ಅವರ ಅಗಲಿಕೆ ನಾಡಿಗೆ ಬಹದೊಡ್ಡ ನಷ್ಟ. ಶಿವಮೊಗ್ಗ  ಸುಬ್ಬಣ್ಣ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರು,

ಅವರ ಸಂಗೀತ ಪರಿವಾರ ಹಾಗೂ ನಾಡಿನ ಜನತೆಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇನ್ನು ಕನ್ನಡದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದಿಂದ ಸಂಗೀತ ಲೋಕ ಮತ್ತು ಕನ್ನಡಿಗರಾದ ನಾವೆಲ್ಲರೂ ಸಿರಿಕಂಠವೊಂದನ್ನು ಕಳೆದುಕೊಂಡಿದ್ದೇವೆ. ಸುಬ್ಬಣ್ಣ ಅವರು ಹಾಡುಗಳ ಮೂಲಕ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖ ದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತಿಳಿಸಿದ್ದಾರೆ.

Exit mobile version