ಅನ್‌ಲಾಕ್ ಬೆನ್ನಲ್ಲೇ BMTC ಪ್ರಯಾಣಿಕರಿಗೆ ಶಾಕ್: ಶೀಘ್ರವೇ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ

ಬೆಂಗಳೂರು, ಜು. 05: ಅನ್ ಲಾಕ್ ಬೆನ್ನಲ್ಲೇ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ “ಬಿಗ್ ಶಾಕ್” ಎದುರಾಗಿದ್ದು, ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ ಎದುರಾಗಿದೆ.

ಇಂಧನ ದರಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಗಳ ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಚರ್ಚೆ ನಡೆಯುತ್ತಿದ್ದು, ಶೀಘ್ರದಲ್ಲೇ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಲಿದೆ. ಈಗಾಗಲೇ ಲಾಕ್ ಡೌನ್, ಇಂಧನ ಬೆಲೆ ಏರಿಕೆಯಿಂದಾಗಿ ಬಿಎಂಟಿಸಿ ಬಸ್ ಗಳ ಟಿಕೆಟ್ ದರ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಸುಳಿವು ನೀಡಿದ್ದು, ಶೀಘ್ರದಲ್ಲೇ ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ತಿಳಿಸಿದ್ದಾರೆ.

Exit mobile version