Visit Channel

ಪಿಯುಸಿ ವಿದ್ಯಾರ್ಥಿಗಳಿಗೆ ಶಾಕ್‌; ಆನ್‌ಲೈನ್‌ ಮೂಲಕ ಪರೀಕ್ಷೆ ಪಿಯು ಮಂಡಳಿ ನಿರ್ಧಾರ

Online-class-800x445

ಬೆಂಗಳೂರು, ಜೂ. 11: ಕೋವಿಡ್​ ಸೋಂಕಿನ ಹಿನ್ನಲೆ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡುವುದಾಗಿ ಈ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿತ್ತು. ಆದರೆ, ಈಗ ಏಕಾಏಕಿ ವಿದ್ಯಾರ್ಥಿಗಳಿಗೆ ಆನ್​ಲೈನ್​ ಪರೀಕ್ಷೆ ನಡೆಸುವ ಮೂಲಕ ಶಾಕ್​ ನೀಡಿದೆ. ವಿದ್ಯಾರ್ಥಿಗಳ ತೇರ್ಗಡೆಗೆ ಎರಡು ಪ್ರಶ್ನೆ ಪತ್ರಿಕೆಯ ಪರೀಕ್ಷೆ ನಡೆಸಲು ಪಿಯು ಮಂಡಳಿ ನಿರ್ಧರಿಸಿದೆ. ಪರೀಕ್ಷೆ ಯಾವ ಮಾದರಿ ನಡೆಯಲಿದೆ ಎಂಬುದರ ಕುರಿತು ಪಿಯು ಮಂಡಳಿಯ ವೆಬ್​ಸೈಟ್​ನಲ್ಲಿ ಮಾದರಿ ಪ್ರಶ್ನಾ ಪತ್ರಿಕೆಯನ್ನು ನೀಡಲಾಗಿದೆ. ಈ ಮೂಲಕ ಶಿಕ್ಷಣ ಸಚಿವರ ಮಾತಿನಿಂದ ಪರೀಕ್ಷೆಯಿಲ್ಲ ಎಂದು ಸಂತಸದಿಂದ ವಿದ್ಯಾರ್ಥಿಗಳಿಗೆ ಪಿಯು ಮಂಡಳಿ ಆಘಾತ ನೀಡಿದೆ. ಇಷ್ಟೇ ಅಲ್ಲದೇ, ಪರೀಕ್ಷೆ ಹೇಗೆ ನಡೆಸಬೇಕು. ಯಾವ ರೀತಿ ಮೌಲ್ಯ ಮಾಪನ ನಡೆಸಬೇಕು ಎಂಬ ಕುರಿತು ಕೂಡ ತಿಳಿಸಲಾಗಿದೆ.

ಹೇಗೆ ನಡೆಯಲಿದೆ ಆನ್ಲೈನ್​​ ಪರೀಕ್ಷೆ

  • ಇಲಾಖೆ ವೆಬ್ ಸೈಟ್ ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನ ವಿದ್ಯಾರ್ಥಿಗಳೇ ಡೌನ್ ಲೋಡ್ ಮಾಡಿಕೊಳ್ಳಬೇಕು
  • ಪ್ರಶ್ನೆಗಳಿಗೆ ಉತ್ತರ ಬರೆದು ವಾಟ್ಸ್ ಅಪ್, ಇ-ಮೇಲ್, ಅಂಚೆ ಮೂಲಕ ರವಾನಿಸಬೇಕು ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಉತ್ತರ ಪತ್ರಿಕೆಯನ್ನ ಕಳುಹಿಸಬೇಕು
  • ಉಪನ್ಯಾಸಕರು ಮೌಲ್ಯಮಾಪನ ಮಾಡಬೇಕು
  • ಮೌಲ್ಯಮಾಪನದ ಬಳಿಕ ಉಪನ್ಯಾಸಕರು SATs (ಸ್ಟೂಡೆಂಟ್ಸ್ ಅಚಿವ್ ಮೆಂಟ್ ಟ್ರಾಕಿಂಗ್ ಸಿಸ್ಟಂ) ಮೂಲಕ ಫಲಿತಾಂಶ ಅಪ್ಲೋಡ್
  • ಅಸಿಸ್ಮೆಂಟ್ ಲೆಕ್ಕಾಚಾರದಲ್ಲಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ನಿರ್ಧಾರ
  • ಜು. 20ರೊಳಗೆ ಅಸಿಸ್ಮೆಂಟ್ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶ
  • ಮೊದಲ ಅಸಿಸ್ಮೆಂಟ್ ಜೂ.20 ಕೊನೆಯ ದಿನವಾಗಿದೆ
  • ಉಪನ್ಯಾಸಕರು ಜೂ.25ರೊಳಗೆ ಮೌಲ್ಯಮಾಪನ ಮಾಡಿರಬೇಕು
  • ಅದೇ ರೀತಿ ಎರಡನೇ ಅಸಿಸ್ಮೆಂಟ್ ಜೂ. 26 ರಿಂದ ಜು.5ರ ಒಳಗೆ ಉಪನ್ಯಾಸಕರು ಜು.10ರೊಳಗೆ ಮೌಲ್ಯಮಾಪನ ಮಾಡಿರಬೇಕು
  • 2 ಪತ್ರಿಕೆಗಳ ಅಂಕವನ್ನ ಸಮೀಕರಣ ಮಾಡಿ ಜು.15 ರೊಳಗೆ ಮುಗಿಸಿ ಜು.20ರೊಳಗೆ ಸ್ಯಾಟ್ಸ್ ನಲ್ಲಿ ಅಪ್ಲೋಡ್ ಮಾಡಬೇಕು
  • ಎರಡೂ ಪರೀಕ್ಷೆಗಳ ಅಂಕವನ್ನ ಜು.20ರೊಳಗೆ ಅಪ್ಲೋಡ್ ಮಾಡಲು ಡೆಡ್ ಲೈನ್ ವಿಧಿಸಲಾಗಿದೆ


ಮೌಲ್ಯಮಾಪನ ಪ್ರಕ್ರಿಯೆ ಹೇಗೆ?

  • ವಿದ್ಯಾರ್ಥಿಗಳಿಗೆ ಪ್ರತೀ ವಿಷಯದಲ್ಲಿ ಕನಿಷ್ಠ 35 ಅಂಕ ಕಡ್ಡಾಯವಾಗಿ ನೀಡಬೇಕು
  • ಪ್ರತಿ ಪತ್ರಿಕೆಗೆ 30 ರಂತೆ 2 ಪತ್ರಿಕೆಗೆ 60 ಅಂಕ ನೀಡಬೇಕು
  • 5 ಅಂಕವನ್ನ ಉಪನ್ಯಾಸಕರು ಆಂತರಿಕ ಅಂಕವೆಂದು ನೀಡಬೇಕು
  • ಪ್ರಾಯೋಗಿಕ ಸಹಿತಿ ವಿಷಯಗಳಿಗೆ ಪ್ರತ್ಯೇಕ ಅಂಕ ನೀಡಬೇಕಿದೆ
  • ಈ ಹಿಂದೆ ನಡೆಸಿದ ಪ್ರಾಯೋಗಿಕ ತರಗತಿಗಳ ಆಧಾರದ ಮೇಲೆ ನಿಷ್ಪಕ್ಷಪಾತವಾಗಿ ಅಂಕ ನೀಡಬೇಕು


ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ಪಿಯು ಬೋರ್ಡ್ ನಿಂದ ಈಗಾಗಲೇ ಈ ಸುತ್ತೋಲೆ ಹೊರಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಾಗುವಂತೆ ಸೂಚನೆ ನೀಡಲಾಗಿದೆ.

Latest News

Lorry driver
ಪ್ರಮುಖ ಸುದ್ದಿ

ಕುಡಿದು ಲಾರಿ ಚಾಲಕನ ಮೇಲೆ ಹಲ್ಲೆ ಮಾಡಿದ ಪೊಲೀಸರು ; ಕೇಸ್ ದಾಖಲಿಸಿಕೊಳ್ಳದೆ ಕಾನೂನು ಉಲ್ಲಂಘನೆ!

ಕುಡಿದ ಆಮಲಿನಲ್ಲಿದ್ದ ಮೂವರು ಪೊಲೀಸರು, “ನೀನು ಯಾವ ಸೀಮೆ ಡ್ರೈವರ್ ___*****” ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೇ, ಚಾಲಕನ ಕೈ, ಕಾಲು ಸೇರಿದಂತೆ ಗುಪ್ತಾಂಗದ ಜಾಗಕ್ಕೆ ಒದ್ದು, ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ.

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.