Bengaluru: ದ್ವಿತೀಯ ಪಿಯುಸಿ (PUC) ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್ ನೀಡಿದೆ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿದೆ. ಹೊಸ ನಿಯಮ ಈ ವರ್ಷದ ಅಂದರೆ 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ. ಸಮಯ ಕಡಿತ ಮಾಡಿರೋ ಸಂಬಂಧ ಕರ್ನಾಟಕ (Karnataka) ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ.
ಇದುವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ (Exam) ಅವಧಿ 3 ಗಂಟೆ ಅವಧಿ ಇರುತ್ತಿತ್ತು. ಆದರೆ ಹೊಸ ನಿಯಮದ ಪ್ರಕಾರ ಇನ್ನು ಮುಂದೆ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಇರಲಿದೆ. ಪರೀಕ್ಷೆಗೆ ಉತ್ತರ ಬರೆಯುವ ಅವಧಿಯನ್ನು 2 ಗಂಟೆ 45 ನಿಮಿಷಗಳಿಗೆ ನಿಗದಿ ಮಾಡಿದ್ದರೂ, ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಓದಿಕೊಳ್ಳಲು ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತದೆ. ಈ ಹಿಂದೆ ಪರೀಕ್ಷಾ ಅವಧಿ 3 ಗಂಟೆ ಇದ್ದಾಗಲೂ ಪ್ರಶ್ನೆಗಳನ್ನು ಓದಿಕೊಳ್ಳಲು ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತಿತ್ತು. ಅದನ್ನು ಇದೀಗ ಪರೀಕ್ಷಾ ಮಂಡಳಿ ಕಡಿತಗೊಳಿಸಿದೆ.
ಹಿಂದಿನ ಪರೀಕ್ಷೆಗಳಲ್ಲಿ ಪ್ರತಿ ವಿಷಯದ ಲಿಖಿತ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುತ್ತಿತ್ತು. 2023-24 ನೇ ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನಕ್ಕೆ ಪ್ರತ್ಯೇಕ ಅಂಕಗಳನ್ನು ನಿಗದಿಪಡಿಸಿದ್ದ ಕಾರಣ ಲಿಖಿತ ಪರೀಕ್ಷೆಯ ಅಂಕಗಳನ್ನು ಕಡಿತ ಮಾಡಲಾಗಿತ್ತು. ಆದರೆ ಪರೀಕ್ಷಾ ಅವಧಿಯನ್ನು ಕಡಿತಗೊಳಿಸಿರಲಿಲ್ಲ.
ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಕಂಪ್ಯೂಟರ್ ಸೈನ್ಸ್ (Computer Science), ಗೃಹ ವಿಜ್ಞಾನ ಸೇರಿದಂತೆ ಪ್ರಾಯೋಗಿಕ ಪರೀಕ್ಷೆ ಇರುವ ಕೆಲವು ವಿಷಯಗಳಿಗೆ ಲಿಖಿತ ಪರೀಕ್ಷೆಯನ್ನು 70 ಅಂಕಗಳಿಗೆ ಹಾಗೂ ಪ್ರಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಲ್ಲಿ 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
Shocking News For 2nd PUC Students Kannada Today
Bengaluru: The government has given a shock to the second PUC students. The allotted time for students to write the exam has been reduced from this year. The new rule will come into force from the examination of this year i.e. 2024-25. The Karnataka Board of School Examination and Evaluation has issued a circular regarding time reduction. The model question papers have been published on the department website.
Till now, the duration of the exam for second PUC students was 3 hours. But according to the new rules, the duration of the exam will be 2 hours and 45 minutes. Although the answer writing time for the exam is fixed at 2 hours 45 minutes, students are given an additional 15 minutes to read the questions. Earlier, when the exam duration was 3 hours, additional 15 minutes were given for reading the questions. It has now been cut by the examination board.
In earlier exams, written test was conducted for 100 marks in each subject. Practical Examination from 2023-24 And the written test marks were deducted as separate marks were allotted for internal assessment. But the test period was not cut.
For some subjects including Physics, Chemistry, Electronics, Computer Science, Home Science, which have practical test, written test is conducted for 70 marks and for subjects without practical test, written test is conducted for 80 marks.