• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಚಿವ ಸಂಪುಟದ ಬೆನ್ನಲ್ಲೇ ನಿಗಮ-ಮಂಡಳಿ ‘ಸರ್ಜರಿ’:2.5 ವರ್ಷ ಅಧಿಕಾರ ಪೂರ್ಣಗೊಳಿಸಿದ ಅಧ್ಯಕ್ಷ-ಉಪಾಧ್ಯಕ್ಷರ ರಾಜೀನಾಮೆಗೆ ಸಿಎಂ ಸೂಚನೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಸಚಿವ ಸಂಪುಟದ ಬೆನ್ನಲ್ಲೇ ನಿಗಮ-ಮಂಡಳಿ ‘ಸರ್ಜರಿ’:2.5 ವರ್ಷ ಅಧಿಕಾರ ಪೂರ್ಣಗೊಳಿಸಿದ ಅಧ್ಯಕ್ಷ-ಉಪಾಧ್ಯಕ್ಷರ ರಾಜೀನಾಮೆಗೆ ಸಿಎಂ ಸೂಚನೆ
0
SHARES
6
VIEWS
Share on FacebookShare on Twitter

ಕೆಲ ಕೈ ನಾಯಕರಿಗೆ (Shocking news for Congress leaders) ಶಾಕಿಂಗ್ ನ್ಯೂಸ್

2.5 ವರ್ಷ ಪೂರೈಸಿದ ನಿಗಮ ಮಂಡಳಿ

ಅಧ್ಯಕ್ಷ-ಉಪಾಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

Bengaluru : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟಕ್ಕೆ ಸಂಬಂಧಿಸಿದ ಚರ್ಚೆಗಳು ಮುಂದುವರಿದಿರುವ (Shocking news for Congress leaders) ನಡುವೆಯೇ, ಇದೀಗ ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಬದಲಾವಣೆಯ ವಿಚಾರವೂ ಮುನ್ನೆಲೆಗೆ ಬಂದಿದೆ.

ರಾಜ್ಯದ ವಿವಿಧ ಸರ್ಕಾರಿ ನಿಗಮ ಮತ್ತು ಮಂಡಳಿಗಳಲ್ಲಿ ಎರಡೂವರೆ ವರ್ಷಕ್ಕೂ ಹೆಚ್ಚು ಅವಧಿ ಪೂರ್ಣಗೊಳಿಸಿರುವ ಶಾಸಕರು ಹಾಗೂ ಪಕ್ಷದ ಮುಖಂಡರು ತಮ್ಮ ಸ್ಥಾನಗಳಿಗೆ

ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Shocking news for Congress leaders

ಸರ್ಕಾರದ ಉಳಿದ ಅವಧಿಯಲ್ಲಿ ನಿಗಮ-ಮಂಡಳಿಗಳಿಗೆ ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಬದಲಾವಣೆಗೆ ಮುಂದಾಗಲಾಗಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಸಂದರ್ಭದಲ್ಲಿ ಸಚಿವ ಸ್ಥಾನ (Shocking news for Congress leaders) ದೊರೆಯದೆ ಅಸಮಾಧಾನಗೊಂಡಿರುವ

ಹಲವು ಶಾಸಕರು ಹಾಗೂ ಪಕ್ಷದ ಹಿರಿಯ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.

ಹೀಗಾಗಿ ಈಗಾಗಲೇ ಎರಡೂವರೆ ವರ್ಷಕ್ಕೂ ಹೆಚ್ಚು ಕಾಲ ಹುದ್ದೆ ನಿರ್ವಹಿಸಿರುವವರನ್ನು ಬದಲಿಸಿ, ಹೊಸಬರಿಗೆ ಅವಕಾಶ ಕಲ್ಪಿಸುವ ಮೂಲಕ ಪಕ್ಷದೊಳಗಿನ ಅಸಮಾಧಾನವನ್ನು ತಣಿಸುವ ಲೆಕ್ಕಾಚಾರವೂ ಇದರ ಹಿಂದೆ ಇರಬಹುದು ಎನ್ನಲಾಗಿದೆ.

ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ನಿರೀಕ್ಷೆಯಲ್ಲಿದ್ದ ಕೆಲವು ಹಿರಿಯ ಶಾಸಕರು ಇತ್ತೀಚೆಗೆ ದೆಹಲಿಗೆ ತೆರಳಿ ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದರು ಎನ್ನಲಾಗಿದೆ.

ಈ ವೇಳೆ ಈಗಾಗಲೇ ದೀರ್ಘಕಾಲದಿಂದ ನಿಗಮ-ಮಂಡಳಿಗಳಲ್ಲಿ ಅಧಿಕಾರದಲ್ಲಿರುವ ಪದಾಧಿಕಾರಿಗಳನ್ನು ಬದಲಿಸಿ, ಹೊಸಬರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಈ ಬೆಳವಣಿಗೆಯ ಬೆನ್ನಲ್ಲೇ ನಿಗಮ-ಮಂಡಳಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಮಾಹಿತಿಯ ಪ್ರಕಾರ, ರಾಜ್ಯದ ವಿವಿಧ ನಿಗಮ-ಮಂಡಳಿಗಳಲ್ಲಿ ಈಗಾಗಲೇ ನಿಗದಿತ ಅವಧಿಗಿಂತ ಹೆಚ್ಚು ಕಾಲ ಕಾರ್ಯನಿರ್ವಹಿಸಿರುವ ಸುಮಾರು 35ಕ್ಕೂ ಹೆಚ್ಚು ಶಾಸಕರು ಹಾಗೂ ಮುಖಂಡರು ಇದ್ದಾರೆ ಎನ್ನಲಾಗಿದೆ.

ಇವರಲ್ಲಿ ಎರಡೂವರೆ ವರ್ಷ ಪೂರ್ಣಗೊಳಿಸಿರುವವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಒಂದು ವೇಳೆ ಈ

ಬದಲಾವಣೆ ಅಧಿಕೃತವಾಗಿ ಜಾರಿಯಾದರೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಿಗಮ-ಮಂಡಳಿಗಳಲ್ಲಿ ದೊಡ್ಡ ಪ್ರಮಾಣದ ಪುನರ್‌ರಚನೆ ನಡೆಯುವ ಸಾಧ್ಯತೆಯಿದೆ.

ಇದರಿಂದ ಸಚಿವ ಸ್ಥಾನ ಸಿಗದ ಶಾಸಕರು ಮತ್ತು ಪಕ್ಷದ ಪ್ರಮುಖ ಕಾರ್ಯಕರ್ತರಿಗೆ ಹೊಸ ಅವಕಾಶಗಳು ತೆರೆಯಬಹುದು.

ಈ ಸಂಬಂಧ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಮೂಲಕ ತಮ್ಮ

ಇಲಾಖೆಗಳ ವ್ಯಾಪ್ತಿಗೆ ಬರುವ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಂದ ರಾಜೀನಾಮೆ ಪತ್ರಗಳನ್ನು ಪಡೆಯುವ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಲಾಗಿದೆ

ಎನ್ನಲಾಗಿದೆ. ಆದರೆ ಈ ಕುರಿತು ಸರ್ಕಾರದಿಂದ ಅಧಿಕೃತವಾಗಿ ಸ್ಪಷ್ಟ ಆದೇಶ ಹೊರಬಿದ್ದ ಬಳಿಕವೇ ಸಂಪೂರ್ಣ ಚಿತ್ರಣ ಸ್ಪಷ್ಟವಾಗಲಿದೆ.

ಸದ್ಯದ ಬೆಳವಣಿಗೆ ಕಾಂಗ್ರೆಸ್‌ನೊಳಗೆ ಹೊಸ ರಾಜಕೀಯ ಸಮೀಕರಣಗಳಿಗೆ ಕಾರಣವಾಗುವ ಸಾಧ್ಯತೆ ಇದ್ದು, ಯಾರಿಗೆ ಸ್ಥಾನ ಉಳಿಯಲಿದೆ, ಯಾರಿಗೆ ಕೊಕ್ ಸಿಗಲಿದೆ ಮತ್ತು ಹೊಸದಾಗಿ ಯಾರಿಗೆ ಜವಾಬ್ದಾರಿ ದೊರೆಯಲಿದೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

Tags: bengalurucabinetchairpersonCongressdkshivakumarResignvicechairperson

Related News

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

September 5, 2026
ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ
ಪ್ರಮುಖ ಸುದ್ದಿ

ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ

September 5, 2026
ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್

September 5, 2026
ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.